ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

33 ಸಾವಿರ ಅಂಶ ಗಡಿ ದಾಟಿದ ಷೇರುಪೇಟೆ

Last Updated 21 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಮುಂಬೈ: ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು ಬುಧವಾರದ ವಹಿವಾಟಿನಲ್ಲಿ 139 ಅಂಶಗಳ ಏರಿಕೆ ದಾಖಲಿಸಿ 33 ಸಾವಿರ ಅಂಶಗಳ ಗಡಿ ದಾಟಿತು.

ವಿದೇಶಿ ನಿಧಿಗಳ ನಿರಂತರ ಬಂಡವಾಳ ಒಳಹರಿವು ಮತ್ತು ವಹಿವಾಟುದಾರರ ಖರೀದಿ ಆಸಕ್ತಿ ಫಲವಾಗಿ ಸೂಚ್ಯಂಕ ಚೇತರಿಕೆ ಕಂಡಿತು. ವಹಿವಾಟಿನ ಒಂದು ಹಂತದಲ್ಲಿ ಸೂಚ್ಯಂಕವು ಗರಿಷ್ಠ ಮಟ್ಟವಾದ 33,355 ಅಂಶಗಳಿಗೆ ತಲುಪಿತ್ತು.

ರಾಷ್ಟ್ರೀಯ ಷೇರುಪೇಟೆ ‘ನಿಫ್ಟಿ’ ಕೂಡ 31 ಅಂಶಗಳ ಏರಿಕೆ ಕಂಡು 10,155 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿತು.

ಮಂಗಳವಾರದ ವಹಿವಾಟಿನಲ್ಲಿ ವಿದೇಶಿ ಹೂಡಿಕೆದಾರರು ₹ 344 ಕೋಟಿ ಮತ್ತು ದೇಶಿ ಸಾಂಸ್ಥಿಕ ಹೂಡಿಕೆದಾರರು ₹ 731 ಕೋಟಿ ಮೊತ್ತದ ಷೇರುಗಳನ್ನು ಖರೀದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT