ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮದಿಂದ ಶಾಂತಿ: ರಂಭಾಪುರಿ ಶ್ರೀ

ಅಡರಕಟ್ಟಿ ಗ್ರಾಮದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮ
Last Updated 22 ಮಾರ್ಚ್ 2018, 10:15 IST
ಅಕ್ಷರ ಗಾತ್ರ

ಲಕ್ಷ್ಮೇಶ್ವರ: ‘ನಿತ್ಯ ಬದುಕಿನಲ್ಲಿ ಧರ್ಮ ಆಚರಣೆಗೆ ತಂದಾಗ ಸುಖ, ಶಾಂತಿ ಲಭಿಸುತ್ತದೆ’ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.

ಸಮೀಪದ ಅಡರಕಟ್ಟಿ ಗ್ರಾಮದಲ್ಲಿ ನಡದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ‘ಸಾಮೂಹಿಕ ವಿವಾಹದಿಂದ ದುಂದು ವೆಚ್ಚಕ್ಕೆ ಕಡಿವಾಣ ಬೀಳುತ್ತದೆ.ಯುವಸಮೂಹ ಇದರತ್ತ ಚಿಂತನೆ ನಡೆಸಬೇಕು’ ಎಂದರು.

‘ವೀರಶೈವ ಮತ್ತು ಲಿಂಗಾಯತ ಧರ್ಮವನ್ನು ಒಡೆಯಬೇಕು ಎನ್ನುವುದು ರಾಜ್ಯ ಸರ್ಕಾರದ ಪೂರ್ವನಿಯೋಜಿತ ಸಂಚಾಗಿತ್ತು.ಇದಕ್ಕೆ ಜನರೇ ಉತ್ತರ ಹೇಳಲಿದ್ದಾರೆ’ ಎಂದು ಮುಕ್ತಿಮಂದಿರದ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

‘ಲಿಂಗಾಯತ ಪ್ರತ್ಯೇಕ ಧರ್ಮ ಆಗುವುದರಿಂದ ಶಿಕ್ಷಣ ಸಂಸ್ಥೆ ನಡೆಸುತ್ತಿರುವ ಲಿಂಗಾಯತ ಧರ್ಮದ ಕೆಲವರಿಗೆ ಮಾತ್ರ ಲಾಭ ಆಗುತ್ತದೆ. ಬೇರೆ ಯಾರಿಗೂ ಯಾವುದೇ ಪ್ರಯೋಜನವಿಲ್ಲ’ ಎಂದು ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.

ಬನ್ನಿಕೊಪ್ಪ ಜಪದಕಟ್ಟಿಮಠದ ಸುಜ್ಞಾನದೇವ ಶಿವಾಚಾರ್ಯ ಶ್ರೀ, ಗಂಜಿಗಟ್ಟಿಯ ಶಿವಲಿಂಗೇಶ್ವರ ಸ್ವಾಮೀಜಿ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಿ.ಎಸ್‌.ಗಡ್ಡದೇವರಮಠ, ಜಿ.ಎಂ.ಮಹಾಂತಶೆಟ್ಟರ, ಶಿವಣ್ಣ ಬಳಿಗಾರ ಇದ್ದರು.ಚನಬಸಪ್ಪ ಹಳಮನಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT