ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ ಹೈಕಮಿಷನರ್‌ ಭಾರತಕ್ಕೆ ವಾಪಸ್‌

Last Updated 22 ಮಾರ್ಚ್ 2018, 20:54 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌/ನವದೆಹಲಿ: ಭಾರತದಲ್ಲಿನ ಪಾಕಿಸ್ತಾನ ಹೈಕಮಿಷನರ್‌ ಸೊಹೈಲ್‌ ಮಹಮೂದ್‌ ಅವರು ಗುರುವಾರ ರಾತ್ರಿ ಇಸ್ಲಾಮಾಬಾದ್‌ನಿಂದ ಹಿಂತಿರುಗಿದ್ದಾರೆ.

ರಾಜತಾಂತ್ರಿಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಭಾರತ ಮತ್ತು ಪಾಕಿಸ್ತಾನ ಪರಸ್ಪರ ಆರೋಪಿಸಿದ ಬಳಿಕ ಸೊಹೈಲ್‌ ಅವರನ್ನು ಸಮಾಲೋಚನೆಗಾಗಿ ಇಸ್ಲಾಮಾಬಾದ್‌ಗೆ ಕರೆಸಿಕೊಳ್ಳಲಾಗಿತ್ತು.

ಶುಕ್ರವಾರ ನವದೆಹಲಿಯಲ್ಲಿ ನಡೆಯಲಿರುವ ಪಾಕಿಸ್ತಾನದ ರಾಷ್ಟ್ರೀಯ ದಿನದ ಅಂಗವಾಗಿ ಸೊಹೈಲ್‌ ಅವರು ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಬೆಳಿಗ್ಗೆ ಅವರು ರಾಷ್ಟ್ರಧ್ವಜಾರೋಹಣ ಮಾಡಿದ ಬಳಿಕ ಭಾಷಣ ಮಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT