ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜೇಶ್ವರಿ ಗಾಯಕವಾಡ್‌ಗೆ ಗಾಯ

Last Updated 23 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಪಿನ್ನರ್ ರಾಜೇಶ್ವರಿ ಗಾಯಕವಾಡ್ ಗಾಯಗೊಂಡಿದ್ದಾರೆ. ತ್ರಿಕೋನ ಟ್ವೆಂಟಿ–20 ಸರಣಿಯಲ್ಲಿ ಅವರ ಬದಲಿಗೆ ಎಡಗೈ ಸ್ಪಿನ್ನರ್ ರಾಧಾ ಯಾದವ್ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ.

‘ಆಸ್ಟ್ರೇಲಿಯಾ ವಿರುದ್ಧ ಗುರುವಾರ ನಡೆದ ಪಂದ್ಯದ ನಂತರ ಅಭ್ಯಾಸದ ವೇಳೆ ಗಾಯಗವಾಡ್ ಅವರ ಬಲಗೈಗೆ ಗಾಯ ಆಗಿದೆ’ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಕಾರ್ಯದರ್ಶಿ ಅಮಿತಾಭ್‌ ಚೌಧರಿ ತಿಳಿಸಿದರು. ತ್ರಿಕೋನ ಸರಣಿಗೆ ಪ್ರಕಟಿಸಿದ ತಂಡದಲ್ಲಿ ಮೊದಲು ಗಾಯಕವಾಡ್ ಸ್ಥಾನ ಗಳಿಸಿರಲಿಲ್ಲ. ಏಕ್ತಾ ಬಿಷ್ಟ್‌ ಬದಲಿಗೆ ಅವರಿಗೆ ಸ್ಥಾನ ನೀಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT