ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭದ್ರತಾ ‍ಪಡೆಯ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ

Last Updated 24 ಮಾರ್ಚ್ 2018, 6:43 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು–ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಯು ಉಗ್ರರ ಮೇಲೆ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ.

ಅನಂತನಾಗ್ ಜಿಲ್ಲೆಯ ಶಿಸ್ತ್ರಾಗಮ್ ಗ್ರಾಮದ ಬಳಿಯ ದೂರು ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ನಿಖರ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿ ಶುಕ್ರವಾರ ರಾತ್ರಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಭದ್ರತಾ ಸಿಬ್ಬಂದಿ ಮತ್ತು ಉಗ್ರರ ನಡುವೆ ನಸುಕಿನಲ್ಲಿ ಗುಂಡಿನ ಚಕಮಕಿ ನಡೆಯಿತು. ದಾಳಿಯಲ್ಲಿ ಇಬ್ಬರು ಉಗ್ರರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಎನ್‌ಕೌಂಟರ್‌ ನಡೆದ ಸ್ಥಳದಲ್ಲಿದ್ದ ಶಸ್ತ್ರಾಸ್ತ್ರ ಹಾಗೂ ಯುದ್ಧ ಸಾಮಾಗ್ರಿಗಳನ್ನು ವಶಕ್ಕೆ ಪಡೆದಿದ್ದೇವೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT