ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎ’ ತಂಡದಲ್ಲಿ ಆಡಲಿರುವ ವಿಜಯ್‌, ರಹಾನೆ

Last Updated 24 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ‘ಟೆಸ್ಟ್ ಕ್ರಿಕೆಟ್‌ ತಂಡದ ಆಟಗಾರರಾದ ಮುರಳಿ ವಿಜಯ್ ಹಾಗೂ ಅಜಿಂಕ್ಯ ರಹಾನೆ ಅವರು ರಾಹುಲ್ ದ್ರಾವಿಡ್ ಮಾರ್ಗದರ್ಶನದ ಭಾರತ ‘ಎ’ ತಂಡದ ಪರ ಇಂಗ್ಲೆಂಡ್‌ ಲಯನ್ಸ್‌ ‘ಎ’ ಕೌಂಟಿ ತಂಡದ ಎದುರು ಆಡಲಿದ್ದಾರೆ’ ಎಂದು ಬಿಸಿಸಿಐ ಆಡಳಿತಾಧಿಕಾರಿಗಳ ಸಮಿತಿ (ಸಿಒಎ) ಮುಖ್ಯಸ್ಥ ವಿನೋದ್ ರಾಯ್ ಹೇಳಿದ್ದಾರೆ.

‘ಇಂಗ್ಲೆಂಡ್‌ನ ಕೌಂಟಿ ತಂಡದ ವಿರುದ್ಧ ಜೂನ್‌ ತಿಂಗಳಿನಲ್ಲಿ ಪ್ರಥಮ ದರ್ಜೆ ಪಂದ್ಯಗಳು ನಡೆಯಲಿವೆ. ಸೀನಿಯರ್ ತಂಡದ ಇಂಗ್ಲೆಂಡ್ ಪ್ರವಾಸ ಸಿದ್ಧತೆಗಾಗಿ ರಹಾನೆ ಹಾಗೂ ವಿಜಯ್ ಕೂಡ ಆಡಲಿದ್ದಾರೆ’ ಎಂದು ರಾಯ್‌ ಹೇಳಿದ್ದಾರೆ.

ಇಂಗ್ಲೆಂಡ್ ಎದುರು ಭಾರತ ತಂಡ ಐದು ಪಂದ್ಯಗಳ ಟೆಸ್ಟ್‌ ಸರಣಿ ಆಡಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT