ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೌಂಟಿ ಆಡಲಿರುವ ವಿರಾಟ್ ಕೊಹ್ಲಿ

Last Updated 24 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮುಂಬರುವ ಇಂಗ್ಲೆಂಡ್ ಎದುರಿನ ಟೆಸ್ಟ್‌ ಸರಣಿಗೆ ಸಜ್ಜುಗೊಳ್ಳುವ ಉದ್ದೇಶದಿಂದ ಕೌಂಟಿ ಕ್ರಿಕೆಟ್‌ನಲ್ಲಿ ಆಡಲಿದ್ದಾರೆ.

ಆಗಸ್ಟ್ ಮತ್ತು ಸೆಪ್ಟೆಂಬರ್‌ ತಿಂಗಳಿನಲ್ಲಿ ಭಾರತ ತಂಡ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ವಿರಾಟ್‌ ಯಾವ ಕೌಂಟಿ ತಂಡದಲ್ಲಿ ಆಡಲಿದ್ದಾರೆ ಎಂಬುದು ಇನ್ನೂ ಖಚಿತಗೊಂಡಿಲ್ಲ. ಸರೆ ತಂಡಕ್ಕಾಗಿ ಆಡುವ ಸಾಧ್ಯತೆ ಹೆಚ್ಚಿದೆ.

‘ವಿರಾಟ್ ಕೌಂಟಿಯಲ್ಲಿ ಆಡುವುದು ಖಚಿತಗೊಂಡಿದೆ. ಸರೆ ಹಾಗೂ ಎಸೆಕ್ಸ್ ಕ್ಲಬ್‌ಗಳೊಂದಿಗೆ ಈಗಾಗಲೇ ಮಾತುಕತೆ ನಡೆದಿದೆ’ ಎಂದು ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ್ದಾರೆ.

‘ಬಾರತ ತಂಡದ ನಾಯಕ ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಯನ್ನು ಗೆದ್ದುಕೊಳ್ಳುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ. ಇದಕ್ಕಾಗಿ ಜೂನ್ 14ರಿಂದ ಆರಂಭವಾಗುವ ಅಫ್ಗಾನಿಸ್ತಾನ ಎದುರಿನ ಏಕೈಕ ಟೆಸ್ಟ್ ಪಂದ್ಯದಲ್ಲಿ ಅವರು ಆಡುವುದು ಅನುಮಾನ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT