ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯ ನಟಿ ಜಯಂತಿ ಅಸ್ವಸ್ಥ

Last Updated 26 ಮಾರ್ಚ್ 2018, 10:25 IST
ಅಕ್ಷರ ಗಾತ್ರ

ಬೆಂಗಳೂರು: ಉಸಿರಾಟದ ತೊಂದರೆಯಿಂದ ಅಸ್ವಸ್ಥಗೊಂಡಿದ್ದ ಹಿರಿಯ ನಟಿ ಜಯಂತಿ ಅವರನ್ನು ಸೋಮವಾರ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಿಗ್ಗೆ 11 ಗಂಟೆಗೆ ಅವರನ್ನು ಆಸ್ಪತ್ರೆಗೆ ದಾಖಸಿಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಕೃತಕ ಉಸಿರಾಟದ ವ್ಯವಸ್ಥೆ ಕಲ್ಪಿಸಲಾಗಿದೆ. ಹಲವು ವರ್ಷಗಳಿಂದ ಜಯಂತಿ ಅವರು ಅಸ್ತಮಾ ಸಮಸ್ಯೆ ಎದುರಿಸುತ್ತಿದ್ದಾರೆ.

* ಅಮ್ಮ ಹಲವು ವರ್ಷಗಳಿಂದ ಅಸ್ತಮಾದಿಂದ ಬಳಲುತ್ತಿದ್ದರು. ಇಂದು ಬೆಳಿಗ್ಗೆ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದ್ದರಿಂದ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ. ಅಮ್ಮ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.

- ಕೃಷ್ಣಕುಮಾರ್, ಜಯಂತಿ ಅವರ ಪುತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT