ಬೆಂಗಳೂರು

ಸಾಧಕಿಯರಿಗೆ ‘ಸ್ಪಂದನ ಸ್ತ್ರೀ’ ಪ್ರಶಸ್ತಿ

ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ, ಸಾಹಿತಿ ಎಂ.ಆರ್.ಕಮಲಾ, ಕಲಾವಿದೆ ಸತ್ಯಭಾಮ, ಪ್ರಜಾಪಿತ ಬ್ರಹ್ಮಕುಮಾರಿ ಸಮಾಜದ ಬಿ.ಕೆ.ಪಾರ್ವತಿ, ಸಮಾಜ ಸೇವಕಿಯರಾದ ಸುಲೋಚನಾ ಎಸ್.ಗುಜ್ಜಾರ್, ಡಾ.ವನಜಾ ಶಿವಕುಮಾರ್ ಅವರಿಗೆ ಸ್ಪಂದನ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ‘ಸ್ಪಂದನ ಸ್ತ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಾಲುಮರದ ತಿಮ್ಮಕ್ಕ ಅವರಿಗೆ ಸಚಿವ ಎಚ್‌.ಎಂ.ರೇವಣ್ಣ ‘ಸ್ಪಂದನ ಸ್ತ್ರೀ’ ಪ್ರಶಸ್ತಿ ಪ್ರದಾನ ಮಾಡಿದರು. ವೇದಿಕೆ ಅಧ್ಯಕ್ಷ ಎಂ.ಶಿವರಾಜು, ಸಚಿವ ಎಂ.ರಾಮಲಿಂಗಾರೆಡ್ಡಿ ಇತರರು ಇದ್ದಾರೆ

ಬೆಂಗಳೂರು: ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ, ಸಾಹಿತಿ ಎಂ.ಆರ್.ಕಮಲಾ, ಕಲಾವಿದೆ ಸತ್ಯಭಾಮ, ಪ್ರಜಾಪಿತ ಬ್ರಹ್ಮಕುಮಾರಿ ಸಮಾಜದ ಬಿ.ಕೆ.ಪಾರ್ವತಿ, ಸಮಾಜ ಸೇವಕಿಯರಾದ ಸುಲೋಚನಾ ಎಸ್.ಗುಜ್ಜಾರ್, ಡಾ.ವನಜಾ ಶಿವಕುಮಾರ್ ಅವರಿಗೆ ಸ್ಪಂದನ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ‘ಸ್ಪಂದನ ಸ್ತ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ನಗರದಲ್ಲಿ ಶನಿವಾರ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಐವರು ಮಹಿಳಾ ಸಾಧಕರಿಗೆ ಸಚಿವರಾದ ಎಂ.ರಾಮಲಿಂಗಾರೆಡ್ಡಿ ಮತ್ತು ಎಚ್‌.ಎಂ.ರೇವಣ್ಣ ಪ್ರಶಸ್ತಿ ಪ್ರದಾನ ಮಾಡಿದರು.

ನಂತರ ಮಾತನಾಡಿದ ಎಂ.ರಾಮಲಿಂಗಾರೆಡ್ಡಿ, ‘ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಮೊದಲ ಬಾರಿಗೆ ಮಹಿಳೆಯರಿಗೆ
ಶೇ 18ರಷ್ಟು ಮೀಸಲಾತಿ ಜಾರಿಗೆ ತಂದರು. ನಂತರ ರಾಜೀವ್ ಗಾಂಧಿಪ್ರಧಾನಿಯಾಗಿದ್ದಾಗ ಮಹಿಳಾ ಮೀಸಲಾತಿಯನ್ನು ಶೇ 33ರಷ್ಟಕ್ಕೆ ಹೆಚ್ಚಿಸಿದರು. ಎಲ್ಲ ಕ್ಷೇತ್ರದಲ್ಲೂ ಮೀಸಲಾತಿಕಲ್ಪಿಸಲಾಗಿದೆ. ಈ ಅವಕಾಶ ಬಳಸಿಕೊಂಡು ಮಹಿಳೆಯರು ಇನ್ನೂ ರಾಜಕೀಯದಲ್ಲೂ ಉತ್ತುಂಗಕ್ಕೆ ಏರಬೇಕು’ ಎಂದು ಅವರು ಆಶಯ ವ್ಯಕ್ತಪಡಿಸಿದರು.

Comments
ಈ ವಿಭಾಗದಿಂದ ಇನ್ನಷ್ಟು
ಗೌರಿ ಹತ್ಯೆ; ಚಾರ್ಜ್‌ಶೀಟ್ ಸಿದ್ಧ

ಬೆಂಗಳೂರು
ಗೌರಿ ಹತ್ಯೆ; ಚಾರ್ಜ್‌ಶೀಟ್ ಸಿದ್ಧ

26 Apr, 2018

ಪೊಲೀಸರಿಂದ ಭದ್ರತೆ
ವಿಮಾನನಿಲ್ದಾಣ ರಸ್ತೆ ಎರಡೂ ಕಡೆ ಶುಲ್ಕ ಸಂಗ್ರಹ

‘ಪೊಲೀಸ್‌ ಭದ್ರತೆಯಲ್ಲಿ ಶುಲ್ಕ ಸಂಗ್ರಹ ಆರಂಭಿಸಲಾಗಿದೆ. ವಿಮಾನ ನಿಲ್ದಾಣಕ್ಕೆ ಹೋಗುವ ಮಾರ್ಗದಲ್ಲಿ 15 ಶುಲ್ಕ ವಸೂಲಾತಿ ಕೇಂದ್ರಗಳಿವೆ. ಹೆಚ್ಚುವರಿಯಾಗಿ ನಾಲ್ಕು ಮೊಬೈಲ್‌ ಕೇಂದ್ರಗಳನ್ನು ಆರಂಭಿಸಲಾಗಿದೆ’...

26 Apr, 2018
ಅಭ್ಯರ್ಥಿ ಶ್ರೀನಿವಾಸ್ ರಾಜೀನಾಮೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶ

ಬೆಂಗಳೂರು/ಶಿವಮೊಗ್ಗ
ಅಭ್ಯರ್ಥಿ ಶ್ರೀನಿವಾಸ್ ರಾಜೀನಾಮೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶ

26 Apr, 2018

ಬೆಂಗಳೂರು
ಒಳಚರಂಡಿ ಪೈಪ್‌ಲೈನ್‌ ಸಮರ್ಪಕ ಅಳವಡಿಕೆಗೆ ಆದೇಶ

‘ಮಂಜುನಾಥ ನಗರ ವ್ಯಾಪ್ತಿಯ ಒಳಚರಂಡಿ ಪೈಪ್‌ಲೈನುಗಳನ್ನು ಬೆಂಗಳೂರು ಜಲಮಂಡಳಿಯು ಆರು ವಾರಗಳಲ್ಲಿ ಸಮಪರ್ಕವಾಗಿ ಅಳವಡಿಸಲು ಕ್ರಮ ಕೈಗೊಳ್ಳಬೇಕು’ ಎಂದು ಬೆಂಗಳೂರು ನಗರ ಗ್ರಾಹಕರ ವ್ಯಾಜ್ಯಗಳ...

26 Apr, 2018

ಕಬ್ಬನ್‌ ಪಾರ್ಕ್‌ ಕೆನೈನ್ಸ್‌, ಬಿಬಿಎಂಪಿ ವತಿಯಿಂದ ಅಭಿಯಾನ
472 ಸಾಕುನಾಯಿಗಳಿಗೆ ಪರವಾನಗಿ

ಕಬ್ಬನ್‌ ಪಾರ್ಕ್‌ ಕೆನೈನ್ಸ್‌ (ಸಿಪಿಸಿ) ಹಾಗೂ ಬಿಬಿಎಂಪಿ ಆಶ್ರಯದಲ್ಲಿ ಕಬ್ಬನ್‌ ಉದ್ಯಾನದಲ್ಲಿರುವ ನಾಯಿ ಉದ್ಯಾನದಲ್ಲಿ (ಡಾಗ್‌ ಪಾರ್ಕ್‌) ಹಮ್ಮಿಕೊಂಡಿದ್ದ ‘3ನೇ ಸಾಕುನಾಯಿ ಪರವಾನಗಿ ಅಭಿಯಾನ’ದಲ್ಲಿ...

26 Apr, 2018