ವಿಧಾನಸಭಾ ಚುನಾವಣೆ 2018

ಕಾಂಗ್ರೆಸ್‌ ಸೇರಲು ಬಿಜೆಪಿ ಜೆಡಿಎಸ್ ಶಾಸಕರ ಆಸಕ್ತಿ: ಡಿ.ಕೆ.ಶಿವಕುಮಾರ್‌

'ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರಲು ಸ್ವಯಂಪ್ರೇರಣೆಯಿಂದ ನನ್ನೊಂದಿಗೆ ಚರ್ಚಿಸಿದ್ದಾರೆ. ಆದರೆ, ಸ್ಥಳೀಯ ಮುಖಂಡರ ಒಮ್ಮತದ ಅಭಿಪ್ರಾಯ ಇದ್ದರೆ ಮಾತ್ರ ಸೇರಿಸಿಕೊಳ್ಳಲಾಗುವುದು’ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಮಾಗಡಿ ಪ್ರವಾಸಿ ಮಂದಿರದಲ್ಲಿ ಇಂದನ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿದರು

ಮಾಗಡಿ: 'ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರಲು ಸ್ವಯಂಪ್ರೇರಣೆಯಿಂದ ನನ್ನೊಂದಿಗೆ ಚರ್ಚಿಸಿದ್ದಾರೆ. ಆದರೆ, ಸ್ಥಳೀಯ ಮುಖಂಡರ ಒಮ್ಮತದ ಅಭಿಪ್ರಾಯ ಇದ್ದರೆ ಮಾತ್ರ ಸೇರಿಸಿಕೊಳ್ಳಲಾಗುವುದು’ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಭೇಟಿ ಹಿನ್ನೆಲೆಯಲ್ಲಿ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್‌ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

‘ಕಾಂಗ್ರೆಸ್ ಮುಖಂಡರು, ಸ್ಥಳೀಯ ಕಾರ್ಯಕರ್ತರು ಬೆಂಬಲ ನೀಡದಿದ್ದರೆ ಬೇರೆ ಯಾವ ಪಕ್ಷದ ಮುಖಂಡರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ನಮಗೆ ವಿರೋಧ ಪಕ್ಷಗಳ ನಾಯಕರ ಅಗತ್ಯವಿಲ್ಲ’ ಎಂದರು.

ರಾಹುಲ್‌ ಗಾಂಧಿ ಅವರು ಮಾಗಡಿಯಲ್ಲಿ ಏ.4ರಂದು ರೋಡ್‌ ಶೋ ನಡೆಸಿದ ನಂತರ ಕೋಟೆ ಬಯಲಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.

ಎಚ್.ಸಿ.ಬಾಲಕೃಷ್ಣ ಮಾತನಾಡಿ, ‘ತಾಲ್ಲೂಕಿನಲ್ಲಿ ಹಳೆ ಮತ್ತು ಹೊಸ ಕಾಂಗ್ರೆಸ್ಸಿಗರು ಎಂಬ ಭೇದವಿಲ್ಲದೆ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ’ ಎಂದರು‌.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್, ಕಾಂಗ್ರೆಸ್‌ ಪಕ್ಷದ ಕಮಲಮ್ಮ, ಪುರಸಭೆ ಅಧ್ಯಕ್ಷ ಎಚ್‌.ಆರ್‌.ಮಂಜುನಾಥ್, ರಾಜ್ಯ ಬೆಸ್ಕಾಂ ನಿರ್ದೇಶಕ ಬಿ.ವಿ.ಜಯರಾಮು, ಸಿ.ಜಯರಾಮ್‌ ಇದ್ದರು.

Comments
ಈ ವಿಭಾಗದಿಂದ ಇನ್ನಷ್ಟು
ಪ್ರಾದೇಶಿಕ ತಾರತಮ್ಯ ನಿವಾರಣೆಗಾಗಿ ಬಾದಾಮಿಯಲ್ಲಿ ಸ್ಪರ್ಧೆ: ಸಿದ್ದರಾಮಯ್ಯ

ಬೆಂಗಳೂರು
ಪ್ರಾದೇಶಿಕ ತಾರತಮ್ಯ ನಿವಾರಣೆಗಾಗಿ ಬಾದಾಮಿಯಲ್ಲಿ ಸ್ಪರ್ಧೆ: ಸಿದ್ದರಾಮಯ್ಯ

26 Apr, 2018
‘ಲೈಂಗಿಕ ದೌರ್ಜನ್ಯ ಸಂತ್ರಸ್ತ ಬಾಲಕರಿಗೂ ಪರಿಹಾರ ನೀಡಿ’

ಶೇ 52.9ರಷ್ಟು ಗಂಡು ಮಕ್ಕಳು
‘ಲೈಂಗಿಕ ದೌರ್ಜನ್ಯ ಸಂತ್ರಸ್ತ ಬಾಲಕರಿಗೂ ಪರಿಹಾರ ನೀಡಿ’

26 Apr, 2018

ತುಮಕೂರು
ಶಂಕಾಸ್ಪದ ಸಾವು : ಪ್ರಕರಣ ಸಿಐಡಿ ತನಿಖೆಗೆ

‘ಪೊಲೀಸರು ಠಾಣೆಗೆ ಕರೆತಂದು ವಿಚಾರಣೆ ನಡೆಸುವಾಗಲೇ ಅವರು ಮೃತಪಟ್ಟಿರುವುದು ಅನುಮಾನಕ್ಕೆ ಕಾರಣವಾಗಿದೆ. ನನ್ನ ಸಹೋದರ ಚೆನ್ನಾಗಿಯೇ ಇದ್ದ. ಮಂಗಳವಾರ ಮಧ್ಯಾಹ್ನವಷ್ಟೇ ಮನೆಗೆ ಬಂದಿದ್ದ. ಆತನ...

26 Apr, 2018
ಕುಕ್ಕರಹಳ್ಳಿ ಕೆರೆಯಲ್ಲಿ ಪೆಲಿಕನ್‌ ಸಾವು

‌ಮೈಸೂರು
ಕುಕ್ಕರಹಳ್ಳಿ ಕೆರೆಯಲ್ಲಿ ಪೆಲಿಕನ್‌ ಸಾವು

26 Apr, 2018

ವಿಜಯಪುರ
‘ದೌರ್ಜನ್ಯಕ್ಕೆ ಬೆದರುವುದಿಲ್ಲ: ಬಬಲೇಶ್ವರ ಭೇಟಿ ನಿಲ್ಲಿಸುವುದಿಲ್ಲ!’

ಧರ್ಮ ಪ್ರಚಾರದ ತಮ್ಮ ಕರ್ತವ್ಯದಿಂದ ಎಂದೂ ವಿಮುಖರಾಗುವುದಿಲ್ಲ. ಬಾಡಿಗೆ ಕಿಡಿಗೇಡಿಗಳ ದೌರ್ಜನ್ಯಕ್ಕೆ ಕಿಮ್ಮತ್ತು ನೀಡುವುದಿಲ್ಲ ಎಂದ ಅವರು, ತಮ್ಮ ಕಾರ್ಯಕ್ಕೆ ಪದೇ ಪದೇ ಅಡ್ಡಿಯಾದರೆ...

26 Apr, 2018