ಮತಗಟ್ಟೆಗಳಲ್ಲಿ ವಿದ್ಯುತ್, ಕುಡಿಯುವ ನೀರು, ಶೌಚಾಲಯ, ಕೊಠಡಿಯಲ್ಲಿ ಸಮರ್ಪಕ ಬೆಳಕಿನ ವ್ಯವಸ್ಥೆಯನ್ನು ಖುದ್ದು ಪರಿಶೀಲಿಸಿದರು. ಕೆಲವೆಡೆ ಸಣ್ಣಪುಟ್ಟ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಸಿಬ್ಬಂದಿಗೆ ಸೂಚಿಸಿದ ಅವರು, ಮತಗಟ್ಟೆ ಬಳಿ ಯಾವುದೇ ರಾಜಕೀಯ ಪಕ್ಷದ ನಾಯಕರ ಭಾವಚಿತ್ರ, ಚಿಹ್ನೆಗಳು ಇರದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.