ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿದ್ದ ಟಿಡಿಪಿ ಸಂಸದರು ಪೊಲೀಸ್ ವಶಕ್ಕೆ

ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡಲು ಆಗ್ರಹಿಸಿ ಪ್ರತಿಭಟನೆ
Last Updated 8 ಏಪ್ರಿಲ್ 2018, 6:44 IST
ಅಕ್ಷರ ಗಾತ್ರ

ನವದೆಹಲಿ: ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿರುವ ತೆಲುಗುದೇಶಂ ಪಕ್ಷದ (ಟಿಡಿಪಿ) ಸಂಸದರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಟಿಡಿಪಿ ಸಂಸದರು ಇಲ್ಲಿನ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿಯವರ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದ್ದರು.

ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಚಾರದಲ್ಲಿ ಕಳೆದ ವಾರವಿಡೀ ಲೋಕಸಭೆಯಲ್ಲಿ ಗದ್ದಲ ಸೃಷ್ಟಿಯಾಗಿದ್ದು, ಹಲವು ಬಾರಿ ಕಲಾಪ ಮುಂದೂಡಲಾಗಿತ್ತು.

ವಿಶೇಷ ಸ್ಥಾನಮಾನ ನೀಡಲು ಕೇಂದ್ರ ನಿರಾಕರಿಸುತ್ತಿರುವುದರ ಬಗ್ಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಮೊರೆ ಹೊಗುವಂತೆ ಪಕ್ಷದ ಸಂಸದರಿಗೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ ಹಿಂದೆಯೇ ಸೂಚಿಸಿದ್ದಾರೆ.

ಈ ಮಧ್ಯೆ, ಆಂಧ್ರ ಪ್ರದೇಶ ಭವನದಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸದಸ್ಯರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT