ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿಂಚಿನ ನೋಂದಣಿ: 22,561 ಅರ್ಜಿ ಸಲ್ಲಿಕೆ

Last Updated 9 ಏಪ್ರಿಲ್ 2018, 6:27 IST
ಅಕ್ಷರ ಗಾತ್ರ

ಬಳ್ಳಾರಿ: ವಿಧಾನಸಭಾ ಚುನಾವಣೆಯ ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಿಕೊಳ್ಳಲು ಚುನಾವಣಾ ಆಯೋಗ ಭಾನುವಾರ ನಡೆಸಿದ ಮಿಂಚಿನ ನೋಂದಣಿ ಅಭಿಯಾನದಲ್ಲಿ ಜಿಲ್ಲೆಯ ವಿವಿಧೆಡೆಯಿಂದ 22,561 ಅರ್ಜಿಗಳು ಸಲ್ಲಿಕೆಯಾಗಿವೆ.

‘ಹೊಸದಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಒಟ್ಟು 16,268 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಹೆಸರು ತೆಗೆದು ಹಾಕಲು 1,974 ಅರ್ಜಿಗಳನ್ನು ಸಲ್ಲಿಕೆಯಾಗಿವೆ.ಹೆಸರು ತಿದ್ದುಪಡಿಗಾಗಿ 3,516 ಅರ್ಜಿಗಳು ಹಾಗೂ ಹೆಸರುಗಳು ಒಂದು ಕಡೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾಯಿಸಲು 803 ಅರ್ಜಿಗಳನ್ನು ಸ್ವೀಕರಿಸಲಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.

‘ಜಿಲ್ಲೆಯಲ್ಲಿರುವ 2,008 ಮತಗಟ್ಟೆಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಬೂತ್‌ಮಟ್ಟದ ಅಧಿಕಾರಿಗಳು ಮತಗಟ್ಟೆಯಲ್ಲಿಯೇ ಲಭ್ಯವಿದ್ದರು. ಮಿಂಚಿನ ನೋಂದಣಿಯನ್ನು ಮತದಾರರು ಸದುಪಯೋಗ ಪಡೆಸಿಕೊಂಡಿದ್ದು, ಜಿಲ್ಲೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ರಾಮಪ್ರಸಾದ್ ಮನೋಹರ್ ತಿಳಿಸಿದರು.

‘ವಾಟ್ಸ್ ಆ್ಯಪ್‌ನಲ್ಲಿ ದೂರು ಸಲ್ಲಿಸಿ’
ಬಳ್ಳಾರಿ: ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ದೂರುಗಳಿಗಾಗಿ ತಕ್ಷಣ ಸ್ಪಂದಿಸುವ ದೃಷ್ಟಿಯಿಂದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ದೂರು ನಿರ್ವಹಣಾ ಕೋಶ ಆರಂಭಿಸಲಾಗಿದೆ’ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ರಾಮಪ್ರಸಾದ್ ಮನೋಹರ್ ತಿಳಿಸಿದ್ದಾರೆ.

‘ದೂರು ನಿರ್ವಹಣಾ ಕೋಶದ ವಾಟ್ಸ್ಆ್ಯಪ್ ನಂಬರ್ 94485 19416 ಆಗಿದೆ. ಜನರು ಚುನಾವಣಾ ಸಂಬಂಧಿತ ದೂರುಗಳನ್ನು ಈ ನಂಬರ್‌ಗೆ ಸಲ್ಲಿಸಬಹುದು. ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ ಇದು ನಿರಂತರ ಕಾರ್ಯನಿರ್ವಹಿಸಲಿದೆ. ಇದಕ್ಕೆ ಬರುವ ದೂರುಗಳನ್ನು ಸಂಬಂಧಿಸಿದ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಗಳಿಗೆ ವರ್ಗಾಯಿಸಿ ಸ್ಪಂದಿಸಲಾಗತ್ತದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಜಿಲ್ಲಾ ದೂರು ನಿರ್ವಹಣಾ ಕೋಶ 1077 ನಿತ್ಯ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲಿದೆ. ಇದರ ಜತೆಗೆ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿಯೂ ದೂರು ನಿರ್ವಹಣಾ ಕೋಶಗಳನ್ನು ಆರಂಭಿಸಲಾಗಿದೆ. ಇ-ಮೇಲ್ ಕೂಡ ತೆರೆಯಲಾಗಿದೆ. ಜನರು ಚುನಾವಣಾ ಸಂಬಂಧಿತ ದೂರುಗಳನ್ನು ಇದಕ್ಕೆ ಸಲ್ಲಿಸಬಹುದಾಗಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT