ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೂರು ಸ್ವೀಕರಿಸಲು ವಾಣಿಜ್ಯ ತೆರಿಗೆ ಅಧಿಕಾರಿಗಳ ನಿಯೋಜನೆ

ವಿಧಾನಸಭೆ ಚುನಾವಣೆ
Last Updated 10 ಏಪ್ರಿಲ್ 2018, 9:00 IST
ಅಕ್ಷರ ಗಾತ್ರ

ಕಲಬುರ್ಗಿ: ವಿಧಾನಸಭಾ ಚುನಾವಣೆ ಅಂಗವಾಗಿ ಸರಕು ಮತ್ತು ಸೇವಾ ತೆರಿಗೆಗೆ ಒಳಪಡುವ ಯಾವುದೇ ಸರಕಿನ ಅಕ್ರಮ ದಾಸ್ತಾನು ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ದೂರು ಸ್ವೀಕರಿಸಲು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳನ್ನು ನಿಯೋಜಿಸಿದೆ.

ಇಲಾಖೆಯ ಕಲಬುರ್ಗಿ ಪೂರ್ವ ವಲಯ ವ್ಯಾಪ್ತಿಯ ಕಲಬುರ್ಗಿ, ಬೀದರ್‌, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಿಗೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಕಲಬುರ್ಗಿ ಪೂರ್ವ ವಲಯದ (ಜಾರಿ) ವಾಣಿಜ್ಯ ತೆರಿಗೆ ಜಂಟಿ ಆಯುಕ್ತ ಪದ್ಮಾಕರ ಆರ್. ಕುಲಕರ್ಣಿ ತಿಳಿಸಿದ್ದಾರೆ.

ಸರಕು ಮತ್ತು ಸೇವಾ ತೆರಿಗೆಗೆ ಒಳಪಡುವ ಯಾವುದೇ ಸರಕಿನ ಅಕ್ರಮ ದಾಸ್ತಾನು, ಸಾಗಾಣೆ ಕಂಡು ಬಂದರೆ ಸಾರ್ವಜನಿಕರು, ವ್ಯಾಪಾರಿಗಳು ಮತ್ತು ವ್ಯಾಪಾರ ಸಂಸ್ಥೆಗಳ ಮಾಹಿತಿಯನ್ನು ಅಧಿಕಾರಿಗಳ ಮೊಬೈಲ್ ಸಂಖ್ಯೆ ಮತ್ತು ವಾಟ್ಸ್‌ಆ್ಯಪ್‌ ಮೂಲಕ ನೀಡಬೇಕು ಎಂದು ಅವರು ಕೋರಿದ್ದಾರೆ.

ನಿಯೋಜನೆಗೊಂಡ ಅಧಿಕಾರಿಗಳು: ಕಲಬುರ್ಗಿ: ಪೂರ್ವ ವಲಯ (ಜಾರಿ) ವಾಣಿಜ್ಯ ತೆರಿಗೆ ಉಪ ಆಯುಕ್ತ ಇರ್ಷಾದ್‌ ಉಲ್ಲಾಖಾನ್, ಮೊ: 94481 44867.

ಬೀದರ್‌: ವಾಣಿಜ್ಯ ತೆರಿಗೆ ಅಧಿಕಾರಿ ಕಾಶಿನಾಥ ಪಲ್ಲೇರಿ, ಮೊ:94480 25199. ಯಾದಗಿರಿ: ವಾಣಿಜ್ಯ ತೆರಿಗೆ ಅಧಿಕಾರಿ ಪಾಕಲ ಬಾಲರಡ್ಡಿ, ಮೊ:94482 51918. ರಾಯಚೂರು: ರಾಜೆಸಾಬ್, ಮೊ:97399 96530.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT