ಕಾವೇರಿ ವಿವಾದ

ಚೆನ್ನೈ: ಐಪಿಎಲ್ ಪಂದ್ಯಗಳ ತಡೆಗೆ ಆಗ್ರಹಿಸಿದ 21 ಎನ್‌ಟಿಕೆ ಕಾರ್ಯಕರ್ತರ ಬಂಧನ

ಕಾವೇರಿ ವಿವಾದ ಸಂಬಂಧ ತಮಿಳುನಾಡಿನಲ್ಲಿ  ಐಪಿಎಲ್ ಪಂದ್ಯಗಳ ತಡೆಗೆ ಆಗ್ರಹಿಸಿ ಪ್ರತಿಭಟನೆ ಕೈಗೊಂಡ 21 ಎನ್‌ಟಿಕೆ (ನಾಮ್ ತಮಿಳರ್ ಕಚ್ಚಿ) ಕಾರ್ಯಕರ್ತರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಚೆನ್ನೈ: ಐಪಿಎಲ್ ಪಂದ್ಯಗಳ ತಡೆಗೆ ಆಗ್ರಹಿಸಿದ 21 ಎನ್‌ಟಿಕೆ ಕಾರ್ಯಕರ್ತರ ಬಂಧನ

ಚೆನ್ನೈ: ಕಾವೇರಿ ವಿವಾದ ಸಂಬಂಧ ತಮಿಳುನಾಡಿನಲ್ಲಿ ಐಪಿಎಲ್ ಪಂದ್ಯಗಳ ತಡೆಗೆ ಆಗ್ರಹಿಸಿ ಮಂಗಳವಾರ ಪ್ರತಿಭಟನೆ ಕೈಗೊಂಡಿದ್ದ 21 ಎನ್‌ಟಿಕೆ (ನಾಮ್ ತಮಿಳರ್ ಕಚ್ಚಿ) ಕಾರ್ಯಕರ್ತರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ತಮಿಳುನಾಡಿನಲ್ಲಿ ಐಪಿಎಲ್ ಪಂದ್ಯಗಳಿಗೆ ಅವಕಾಶ ನೀಡಬಾರದೆಂದು ಒತ್ತಾಯಿಸುತ್ತಿದ್ದರು.

ಪ್ರತಿಭಟನೆ ವೇಳೆಯಲ್ಲಿ ಕಾರ್ಯನಿರತ ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದ ಪ್ರಕರಣದ ಆರೋಪದಲ್ಲಿ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಆದಾಗ್ಯೂ ಮಂಗಳವಾರ ನಡೆದ ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ನಡುವಿನ ಪಂದ್ಯದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯಲಿಲ್ಲ. 

ಈ ಸಂಬಂಧ ಸಾಹಿತಿ ವೈರಮುತ್ತು ರಾಮಸಾಮಿ, ನಿರ್ದೇಶಕ ಪಿ ಭಾರತೀರಾಜ, ಶಾಸಕ ಕರುಣಾಸ್ ಅವರು ಸೇರಿದಂತೆ 500ಕ್ಕೂ ಹೆಚ್ಚು ಪ್ರತಿಭಟನಾಕಾರರ ಮೇಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನಟ ರಜನಿಕಾಂತ್ ಅವರು, ಹಿಂಸಾತ್ಮಕ ದಾರಿಯೇ ಪರಿಹಾರವಲ್ಲ ಎಂದು ಹೇಳಿದ್ದಾರೆ. 

Comments
ಈ ವಿಭಾಗದಿಂದ ಇನ್ನಷ್ಟು

ಸಿಜೆಐಗೆ ಹಿರಿಯ ನ್ಯಾಯಮೂರ್ತಿಗಳ ಪತ್ರ
‘ಬಿಕ್ಕಟ್ಟು ಪರಿಹಾರಕ್ಕೆ ಸಭೆ ಕರೆಯಿರಿ’

ದೇಶದ ಉನ್ನತ ನ್ಯಾಯಾಂಗ ವ್ಯವಸ್ಥೆ ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಚರ್ಚೆಗೆ ಸುಪ್ರೀಂ ಕೋರ್ಟ್‌ನ ಎಲ್ಲ ನ್ಯಾಯಮೂರ್ತಿಗಳ ಸಭೆ ಕರೆಯುವಂತೆ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿಗಳಿಬ್ಬರು...

26 Apr, 2018
ವರ್ಷದ ಕೊನೆಗೆ ಎಂಜಿನ್‌ರಹಿತ ರೈಲು ಸಂಚಾರ

ಸಂಪೂರ್ಣ ದೇಶೀಯವಾದ ಟ್ರೇನ್‌–18
ವರ್ಷದ ಕೊನೆಗೆ ಎಂಜಿನ್‌ರಹಿತ ರೈಲು ಸಂಚಾರ

26 Apr, 2018
‘ಸುಪ್ರೀಂ’ಗೆ ಇಂದು ಮಲ್ಹೋತ್ರಾ

ನವದೆಹಲಿ
‘ಸುಪ್ರೀಂ’ಗೆ ಇಂದು ಮಲ್ಹೋತ್ರಾ

26 Apr, 2018

ನವದೆಹಲಿ
‘ಆಧಾರ್‌ ಜೋಡಣೆ ಕಡ್ಡಾಯ ಎಂದಿಲ್ಲ’

ಮೊಬೈಲ್‌ ಸಂಖ್ಯೆಗೆ ಆಧಾರ್‌ ಜೋಡಣೆ ಕಡ್ಡಾಯಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಬುಧವಾರ ಪ್ರಶ್ನಿಸಿದೆ.

26 Apr, 2018
ಕೇಂಬ್ರಿಜ್ ಅನಲಿಟಿಕಾ, ಫೇಸ್‌ಬುಕ್‌ಗೆ ನೋಟಿಸ್‌

ನವದೆಹಲಿ
ಕೇಂಬ್ರಿಜ್ ಅನಲಿಟಿಕಾ, ಫೇಸ್‌ಬುಕ್‌ಗೆ ನೋಟಿಸ್‌

26 Apr, 2018