ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನ ಜಾಗೃತಿಗೆ ಪಂಜಿನ ಮೆರವಣಿಗೆ

ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ಕಾರ್ಯಕ್ರಮ, ಕಡ್ಡಾಯವಾಗಿ ಮತದಾನ ಮಾಡಲು ಸಲಹೆ
Last Updated 13 ಏಪ್ರಿಲ್ 2018, 12:35 IST
ಅಕ್ಷರ ಗಾತ್ರ

ಕೊಪ್ಪಳ: ತಾಲ್ಲೂಕು ಪಂಚಾಯಿತಿ ಹಾಗೂ ಕಿನ್ನಾಳ ಗ್ರಾಮ ಪಂಚಾಯಿತಿ ವತಿಯಿಂದ ವಿಧಾನಸಭೆ ಚುನಾವಣೆ ಅಂಗವಾಗಿ ಮತದಾನ ಕುರಿತು ಮತದಾರರಲ್ಲಿ ಅರಿವು ಮೂಡಿಸಲು ಸ್ವೀಪ್ ಸಮಿತಿ ವತಿಯಿಂದ ಬುಧವಾರ ಕಿನ್ನಾಳ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಂಜಿನ ಮೆರವಣಿಗೆ ನಡೆಯಿತು. ಅಲ್ಲದೆ, ಮಾನವ ಸರಪಳಿ ನಿರ್ಮಿಸಿ ಅರಿವು ಮೂಡಿಸಲಾಯಿತು.

ಪಂಜಿನ ಮೆರವಣಿಗೆಗೆ ಚಾಲನೆ ನೀಡಿದ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ವೆಂಕಟರಾಜಾ ಮಾತನಾಡಿ, ‘ಎಲ್ಲ ನೌಕರರು ಸಾರ್ವಜನಿಕರಿಗೆ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಬೇಕು. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು’ ಎಂದರು.

‘ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ ಸ್ವಯಂ ಪ್ರೇರಣೆಯಿಂದ  ಮತದಾನ ಮಾಡಲು ಮತದಾರರಿಗೆ ಪ್ರೇರೇಪಿಸಬೇಕು. ವಿಶ್ವದಲ್ಲಿ ಭಾರತ ಬೃಹತ್ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ರಾಷ್ಟ್ರವಾಗಿದ್ದು, ಸಂವಿಧಾನದಲ್ಲಿ ಎಲ್ಲರಿಗೂ ಮತದಾನ ಮಾಡಲು ಹಕ್ಕು ನೀಡಲಾಗಿದೆ. ಯಾವುದೇ ಕಾರಣಕ್ಕೂ ಸಾರ್ವಜನಿಕರು ಮತದಾನದಿಂದ ದೂರ ಉಳಿಯಬಾರದು’ ಎಂದು ಹೇಳಿದರು.

‘ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ಈಗಾಗಲೇ ಸ್ವೀಪ್ ಸಮಿತಿ ಮೂಲಕ ಮತದಾನದ ಅರಿವು ಕುರಿತ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದ್ದು, ಕಿನ್ನಾಳ ಗ್ರಾಮದಲ್ಲಿ ಆಯೋಜಿಸಲಾದ ಪಂಜಿನ ಮೆರವಣೆಗೆ ಕಾರ್ಯಕ್ರಮ ಒಂದು ಹೊಸ ಹಾಗೂ ಒಳ್ಳೆಯ ಕಾರ್ಯಕ್ರಮ’ ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ಕೃಷ್ಣಮೂರ್ತಿ ಮಾತನಾಡಿ, ‘ಮುಂಬರುವ ಐದು ವರ್ಷಗಳ ಅಭಿವೃದ್ಧಿಗೆ ನಿಮ್ಮ ಮತವನ್ನು ಯೋಚನೆಯಿಂದ ಚಲಾಯಿಸಿ ದೇಶದ ಅಭಿವೃದ್ಧಿಗೆ ನಾಂದಿ ಹಾಡಿ. ಮೇ. 12ರಂದು ಮತದಾನ ಕೇಂದ್ರಗಳಲ್ಲಿ ಅಗತ್ಯ ಕುಡಿಯುವ ನೀರು ಸೇರಿ ಇತರ ಮೂಲಸೌಲಭ್ಯ ಕಲ್ಪಿಸಲು ಈಗಾಗಲೇ ಕ್ರಮವಹಿಸುವಂತೆ ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದರು.

ಕಾರ್ಯಕ್ರಮದಲ್ಲಿ ಮತದಾನ ಕಡ್ಡಾಯ, ನಮ್ಮ ಮತ ನಮ್ಮ ಹಕ್ಕು, ನಮ್ಮ ಭವಿಷ್ಯ ನಮ್ಮ ಕೈಯಲ್ಲಿದೆ, ಮತದಾನ ಮಾಡಿದವನೇ ಮಹಾಶೂರ ಮುಂತಾದ ಘೋಷಣೆ ಕೂಗಿ ಜಾಗೃತಿ ಮೂಡಿಸಲಾಯಿತು.  ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ಶರಣಯ್ಯ ಸಸಿಮಠ ಇದ್ದರು.

**

ಎಲ್ಲರೂ ಮತದಾನ ಮಾಡುವಂತೆ ಅರಿವು ಮೂಡಿಸಬೇಕು. ಯಾವುದೇ ಆಮಿಷಗಳಿಗೆ ಒಳಗಾಗದೇ ಸ್ವಯಂ ಪ್ರೇರಣೆಯಿಂದ ಮತ ಹಾಕಬೇಕು – ವೆಂಕಟರಾಜಾ,ಅಧ್ಯಕ್ಷ, ಜಿಲ್ಲಾ ಸ್ವೀಪ್‌ ಸಮಿತಿ. 

**

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT