ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿಪಕ್ಷೀಯ ಒಪ್ಪಂದಗಳಿಗೆ ಚೀನಾ ಬದ್ಧ

Last Updated 16 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಬೀಜಿಂಗ್‌: ‘ಭಾರತದ ಜೊತೆಗಿನ ದ್ವಿಪಕ್ಷೀಯ ಒಪ್ಪಂದಗಳಿಗೆ ಚೀನಾವು ಬದ್ಧವಾಗಿದ್ದು, ಸಹಕಾರ ಮತ್ತು ಸುರಕ್ಷತೆ ನಿಟ್ಟಿನಲ್ಲಿ ಹೊಸ ಅವಕಾಶಗಳ ಬಗ್ಗೆಯೂ ಎದುರು ನೋಡುತ್ತಿದೆ’ ಎಂದು ಇಲ್ಲಿನ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಎರಡು ರಾಷ್ಟ್ರಗಳ ನಡುವೆ ನಡೆಯುತ್ತಿರುವ ಉನ್ನತ ಮಟ್ಟದ ಸಭೆ ಕುರಿತಂತೆ ಪತ್ರಿಕಾಗೋಷ್ಠಿ ವೇಳೆ ಉತ್ತರಿಸಿದ ವಿದೇಶಾಂಗ ಇಲಾಖೆ ವಕ್ತಾರೆ ಹುವಾ ಚುನ್ಯಿಂಗ್‌, ಈ ವರ್ಷದಲ್ಲಿ ಭಾರತ ಜೊತೆಗಿನ ಸಹಭಾಗಿತ್ವದಲ್ಲಿ ಮಹತ್ತರ ಪ್ರಗತಿ ಸಾಧಿಸಲಾಗಿದೆ’ ಎಂದು ತಿಳಿಸಿದ್ದಾರೆ. ‌

ದೋಕಲಾ ಗಡಿ ವಿಚಾರದಲ್ಲಿ ಎರಡು ರಾಷ್ಟ್ರಗಳ ಸೇನೆಯ ನಡುವೆ ಉಂಟಾದ ಘರ್ಷಣೆ ಬಳಿಕ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಮಾತುಕತೆಗೆ ಎರಡು ರಾಷ್ಟ್ರಗಳು ಚಾಲನೆ ನೀಡಿದ್ದವು. ‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT