ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಯಡಿಯೂರಪ್ಪ–ಭೀಮಣ್ಣ ಖಂಡ್ರೆ ಒಳಒಪ್ಪಂದ’

ಮಾಜಿ ಶಾಸಕ ಪ್ರಕಾಶ ಖಂಡ್ರೆ ಆರೋಪ
Last Updated 17 ಏಪ್ರಿಲ್ 2018, 5:58 IST
ಅಕ್ಷರ ಗಾತ್ರ

ಬೀದರ್‌: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಡಿಸೆಂಬರ್‌ನಲ್ಲಿ ಬೆಂಗಳೂರಿನಲ್ಲಿ ಮಾಜಿ ಸಚಿವ ಭೀಮಣ್ಣ ಖಂಡ್ರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಜತೆಗೆ ಒಳಒಪ್ಪಂದ ಮಾಡಿಕೊಂಡ ಕಾರಣ ನನಗೆ ಭಾಲ್ಕಿ ಕ್ಷೇತ್ರದ ಬಿಜೆಪಿ ಟಿಕೆಟ್‌ ದೊರೆತಿಲ್ಲ’ ಎಂದು ಮಾಜಿ ಶಾಸಕ ಪ್ರಕಾಶ ಖಂಡ್ರೆ ಆರೋಪಿಸಿದ್ದಾರೆ.

‘40 ವರ್ಷಗಳಿಂದ ರಾಜಕೀಯದಲ್ಲಿ ಇದ್ದೇನೆ. ನಾನು ಎರಡನೇ ಬಾರಿಗೆ ಭಾಲ್ಕಿ ಕ್ಷೇತ್ರದಿಂದ ಆಯ್ಕೆಯಾದಾಗ ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. 17 ಜನ ಶಾಸಕರು ಸಹಿ ಮಾಡಿ ನನಗೆ ಸಚಿವ ಸ್ಥಾನ ಕೊಡುವಂತೆ ಲಿಖಿತ ಮನವಿ ಮಾಡಿದ್ದರು. ಆದರೆ, ಯಡಿಯೂರಪ್ಪ ಅವರು ಮನವಿಯನ್ನು ಪುರಸ್ಕರಿಸಲಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಭೀಮಣ್ಣ ಖಂಡ್ರೆ ಹಾಗೂ ಈಶ್ವರ ಖಂಡ್ರೆ ಅವರು ರಾಜಕೀಯವಾಗಿ ನನ್ನನ್ನು ಮುಗಿಸಲು ವ್ಯವಸ್ಥಿತ ಪಿತೂರಿ ನಡೆಸಿದ್ದಾರೆ.
ನಾನು ಅಪ್ಪಟ ಬಿಜೆಪಿ ಕಾರ್ಯಕರ್ತ. ಏಪ್ರಿಲ್‌ 18 ರಂದು ಬೆಂಬಲಿಗರ ಸಭೆ ಕರೆದಿದ್ದೇನೆ. ಬಿಜೆಪಿಯಲ್ಲಿ ಉಳಿಯಬೇಕೋ ಅಥವಾ ತೊರೆಯಬೇಕೊ ಎನ್ನುವ ಕುರಿತು ಅಂದು ನನ್ನ ನಿರ್ಧಾರ ಪ್ರಕಟಿಸುವೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT