ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಆರೋಪ ತಳ್ಳಿ ಹಾಕಿದ ಪಾಕ್‌

Last Updated 17 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಖಲಿಸ್ತಾನ ವಿವಾದಕ್ಕೆ ಸಂಬಂಧಿಸಿದಂತೆ ಭಾರತದ ಸಿಖ್ ಯಾತ್ರಿಕರಿಗೆ ಪ್ರಚೋದನೆ ನೀಡಲಾಗುತ್ತಿದೆ ಎಂಬ ಆರೋಪವನ್ನು ಪಾಕಿಸ್ತಾನವು ತಳ್ಳಿಹಾಕಿದೆ.

ಈ ವಿವಾದವನ್ನು ಕೆಣಕಿದ ಪಾಕಿಸ್ತಾನದ ವಿರುದ್ಧ ಸೋಮವಾರ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದ ಭಾರತ, ಈ ಸಂಬಂಧ ದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರಿಗೆ ಸಮನ್ಸ್ ಜಾರಿ ಮಾಡಿತ್ತು. ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಧಕ್ಕೆ ಉಂಟು ಮಾಡುವ ಮಾಡುವ ಕೃತ್ಯಗಳನ್ನು ಕೂಡಲೇ ನಿಲ್ಲಿಸುವಂತೆ ಸಮನ್ಸ್‌ನಲ್ಲಿ ಭಾರತ ಹೇಳಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನದ ವಿದೇಶಾಂಗ ಕಚೇರಿ, ಭಾರತ ಇಂತಹ ಸುಳ್ಳುಗಳನ್ನು ಹರಡುವ ಮೂಲಕ ಸಿಖ್ ಯಾತ್ರಿಗಳ ಭೇಟಿಯ ಸುತ್ತಲೂ ಉದ್ದೇಶಪೂರ್ವಕವಾಗಿ ಮತ್ತಷ್ಟು ವಿವಾದ ಸೃಷ್ಟಿಸುತ್ತಿದೆ ಎಂದು ಆರೋಪಿಸಿದೆ.

ಕಳೆದ ಏಪ್ರಿಲ್ 14ರಂದು ಭಾರತದ 1,800 ಸಿಖ್‌ ಯಾತ್ರಿಕರು ಪಾಕಿಸ್ತಾನದಲ್ಲಿರುವ ಗುರುದ್ವಾರ ಪಂಜಾ ಸಾಹಿಬ್‌‌ಗೆ ತೆರಳಿದ್ದರು. ಈ ವೇಳೆ ಭಾರತದ ಪ್ರಜೆಗಳಿಗೆ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿಗಳ ಭೇಟಿಗೆ ಅವಕಾಶ ಕೊಟ್ಟಿರಲಿಲ್ಲ. ಅಲ್ಲದೇ, ಸಿಖ್‌ ಯಾತ್ರಿಕರಿಗೆ ಒದಗಿಸಬಹುದಾದ ನೆರವಿಗೂ ಅದು
ಅಡ್ಡಿಪಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT