ಏಪ್ರಿಲ್ 27ರಂದು ಮಲ್ಲೇಶ್ವರದ ಸ್ಯಾಂಕಿ ಕೆರೆ ಬಳಿ, ಏ.28ರಂದು ಚಾಮರಾಜಪೇಟೆಯ ಕೋಟೆ ಪ್ರೌಢಶಾಲೆ ಮೈದಾನ, 29ರಂದು ಕಬ್ಬನ್ ಉದ್ಯಾನದ ಬ್ಯಾಂಡ್ ಸ್ಟ್ಯಾಂಡ್ ಬಳಿ ವಸ್ತುಪ್ರದರ್ಶನ ಇರುತ್ತದೆ. ಪ್ರತಿ ದಿನ ಬೆಳಿಗ್ಗೆ 6ರಿಂದ ರಾತ್ರಿ 9ರವರೆಗೆ ಪ್ರದರ್ಶನ ಇರಲಿದೆ. ಬೆಂಗಳೂರಿನ ಪಾರಂಪರಿಕ ಕಟ್ಟಡಗಳ ಇತಿಹಾಸ ಹಾಗೂ ಚಿತ್ರಗಳನ್ನು ಒಳಗೊಂಡ ವಾಹನವು ಪ್ರತಿದಿನ ಈ ಸ್ಥಳಗಳಿಗೆ ತೆರಳುತ್ತದೆ. ಸಾರ್ವಜನಿಕರಿಗೆ ಮುಕ್ತ ಅವಕಾಶವಿದ್ದು, ಪಾರಂಪರಿಕ ಕಟ್ಟಡಗಳ ಬಗ್ಗೆ ಮಾಹಿತಿ ತಿಳಿಯಬಹುದು.