ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಉತ್ತಮ ಸಮಾಜ ನಿರ್ಮಾಣಕ್ಕೆ ಮತದಾನ ಅಗತ್ಯ’

ಮತದಾರರ ಜಾಗೃತಿ–ಆರೋಗ್ಯ ಶಿಬಿರ
Last Updated 18 ಏಪ್ರಿಲ್ 2018, 10:30 IST
ಅಕ್ಷರ ಗಾತ್ರ

ಜಾಲಹಳ್ಳಿ: ಮೇ 12ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ತಪ್ಪದೇ ಮತ ಚಲಾಯಿಸಬೇಕು ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಬನದೇಶ್ವರ ಹೇಳಿದರು.

ಮಂಗಳವಾರ ಪಟ್ಟಣದ ಸಮುದಾಯ ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆದ ಮತದಾರರ ಜಾಗೃತಿ ಹಾಗೂ ಆರೋಗ್ಯ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

‘ಸಂವಿಧಾನಬದ್ಧ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪ್ರಮುಖ ಹಕ್ಕು ಆಗಿದೆ. ಆರೋಗ್ಯವಂತ, ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು. ಸುಭದ್ರ ಸರ್ಕಾರ ರಚನೆಯಲ್ಲಿ ಪ್ರತಿಯೊಬ್ಬರದ್ದು ಪ್ರಮುಖ ಪಾತ್ರವಿರಬೇಕು’ ಎಂದು ಅವರು ತಿಳಿಸಿದರು.

ರಚಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ವಯಸ್ಕರರು ತಮ್ಮ ಅಮೂಲ್ಯ ಮತವನ್ನು ತಪ್ಪದೇ ಚಲಾಯಿಸಿ, ಒಳ್ಳೆಯ ಸಮಾಜ ನಿರ್ಮಾಣಕ್ಕೆ ಮತದಾನ ಅಗತ್ಯವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಭದ್ರಪಡಿಸಬೇಕಾದ ಗುರುತರ ಜವಾಬ್ದಾರಿ ನಮಗಿದೆ ಎಂದು ತಿಳಿಸಿದರು.

ಮುಖ್ಯ ವೈದ್ಯಾಧಿಕಾರಿ ಡಾ.ಆರ್.ಎಸ್.ಹುಲಿಮನಿ, ಡಾ.ಸುನೀಲ್, ಡಾ.ಶಿವಾನಂದ, ಡಾ.ರಾಜೇಶ್ವರಿ, ಡಾ.ವಿಶ್ವನಾಥ, ಡಾ.ಶೃತಿ, ಡಾ.ಮಂಜುಳಾ, ಡಾ.ವೇದಾ, ಡಾ.ಶಿವಕುಮಾರ, ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ರಾಮಸ್ವಾಮಿ,ಶಾರದಾ,ದಿಲೀಪಕುಮಾರ,ದೇವೀಂದ್ರಪ್ಪ, ರಾಜು, ವಿರೇಶ, ಅಜರ ಹುಸೇನ್, ಫಕ್ರುದ್ದೀನ್, ಮಂಜುಳಾ, ಚೆನ್ನಮ್ಮ, ದುರುಗಮ್ಮ,ಬಸವರಾಜ ಬ್ಯಾಗವಟ್‌ ಇದ್ದರು.

ಐಸಿಟಿಸಿ ಆಪ್ತ ಸಮಾಲೋಚಕರಾದ ರಾಜೇಶ ದೇಶಪಾಂಡೆ ಅವರು ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT