ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಮಂಡಳಿ ಆದೇಶ ಪ್ರಶ್ನಿಸಿ ರಿಟ್‌

ರಾಜ್ಯ ವಕೀಲರ ಪರಿಷತ್‌ ಚುನಾವಣೆ ರದ್ದು
Last Updated 19 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಭಾರತೀಯ ವಕೀಲರ ಪರಿಷತ್‌ನ ಚುನಾವಣಾ ನ್ಯಾಯಮಂಡಳಿಯು, ರಾಜ್ಯ ವಕೀಲರ ಪರಿಷತ್ ಚುನಾವಣೆ ರದ್ದುಪಡಿಸಿರುವ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ.

ಭಾರತೀಯ ವಕೀಲರ ಪರಿಷತ್‌ ಸದಸ್ಯರೂ ಆದ ಚುನಾವಣೆಗೆ ಸ್ಪರ್ಧಿಸಿರುವ ಹಿರಿಯ ವಕೀಲ ವೈ.ಆರ್. ಸದಾಶಿವ ರೆಡ್ಡಿ ಈ ಕುರಿತಂತೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿ ಆರ್.ಎಸ್‌. ಚೌಹಾಣ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ಈ ಅರ್ಜಿ ವಿಚಾರಣೆಗೆ ಬಂದಿತ್ತು.

ಅರ್ಜಿ ಪರಿಶೀಲಿಸಿದ ನ್ಯಾಯಮೂರ್ತಿಗಳು, ‘ಈ ಅರ್ಜಿಯ ವಿಚಾರಣೆ ವಿಭಾಗೀಯ ಪೀಠದಲ್ಲಿ ನಡೆಯಬೇಕಿದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ಶುಕ್ರವಾರಕ್ಕೆ (ಏ.20) ಮುಂದೂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT