ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ 12 ನಾಮಪತ್ರ ಸಲ್ಲಿಕೆ

Last Updated 21 ಏಪ್ರಿಲ್ 2018, 7:03 IST
ಅಕ್ಷರ ಗಾತ್ರ

ಚಿತ್ರದುರ್ಗ:  ರಾಜ್ಯ ವಿಧಾನಸಭಾ ಚುನಾವಣೆಗೆ ಶುಕ್ರವಾರ ಜಿಲ್ಲೆಯಲ್ಲಿ 12 ನಾಮಪತ್ರ ಸಲ್ಲಿಕೆಯಾಗಿವೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷೇತರರಾಗಿ ಎನ್.ಮಂಜುನಾಥ, ವಿ.ಎಸ್.ಭೂತರಾಜ, ಚಳ್ಳಕೆರೆ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಟಿ.ರಘುಮೂರ್ತಿ ನಾಮಪತ್ರ ಸಲ್ಲಿಸಿದ್ದಾರೆ.

ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಡಾ.ಬಿ. ಯೋಗೇಶ್‌ ಬಾಬು, ಜೆಡಿಎಸ್‌ನಿಂದ ಪಟೇಲ್ ಜಿ.ಎಂ.ತಿಪ್ಪೇಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ.

ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್‌ನಿಂದ ಡಿ.ಯಶೋಧರ 3 ನಾಮಪತ್ರ ಸಲ್ಲಿಸಿದ್ದು, ಪಕ್ಷೇತರರಾಗಿ ಎಸ್.ರಂಗಯ್ಯ, ಹೊಸದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಬಿ.ಜಿ.ಗೋವಿಂದಪ್ಪ, ಬಿಜೆಪಿಯಿಂದ ಗೂಳಿಹಟ್ಟಿ ಡಿ.ಶೇಖರ್, ಪಕ್ಷೇತರರಾಗಿ ಎ.ಆರ್. ಶಮಂತ್ ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ವಿ.ವಿ. ಜ್ಯೋತ್ಸ್ನಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT