ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಪ್ರತಿಭಟನೆ

Last Updated 23 ಆಗಸ್ಟ್ 2018, 9:02 IST
ಅಕ್ಷರ ಗಾತ್ರ

ಹೊಸಪೇಟೆ: ಇಲ್ಲಿನ ಚಿತ್ತವಾಡ್ಗಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿಷಯವಾರು ಬೋಧನೆಗೆ ಕಾಯಂ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವಜನ ತಾಲ್ಲೂಕು ಸಮಿತಿಯ (ಎ.ಐ.ಡಿ.ವೈ.ಒ.) ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕಾಲೇಜಿನಿಂದ ಪ್ರಮುಖ ರಸ್ತೆಗಳ ಮೂಲಕ ತಾಲ್ಲೂಕು ಕಚೇರಿ ವರೆಗೆ ರ್‍ಯಾಲಿ ನಡೆಸಿದರು. ನಂತರ ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.

‘ವಿಜ್ಞಾನ, ವಾಣಿಜ್ಯಶಾಸ್ತ್ರ ಮತ್ತು ಕಲಾ ವಿಭಾಗದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಂಡಿದ್ದಾರೆ. ಬಡ ಮತ್ತು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಶೈಕ್ಷಣಿಕ ವರ್ಷ ಆರಂಭವಾಗಿ ಮೂರು ತಿಂಗಳಾದರೂ ಉಪನ್ಯಾಸಕರ ಕೊರತೆ ನೀಗಿಸಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ’ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

‘ವರ್ಗಾವಣೆಗೊಂಡಿರುವ ವಿಜ್ಞಾನ ವಿಷಯದ ಪ್ರಾಧ್ಯಾಪಕರ ಬದಲಿಗೆ ಬೇರೊಬ್ಬರು ಬಂದಿಲ್ಲ. ಆ ತರಗತಿಗಳೇ ನಡೆಯುತ್ತಿಲ್ಲ. ಜೀವಶಾಸ್ತ್ರ, ಭೌತಶಾಸ್ತ್ರ, ಗಣಿತ ಮತ್ತು ರಸಾಯನ ಶಾಸ್ತ್ರವನ್ನು ಒಬ್ಬರೇ ಅತಿಥಿ ಉಪನ್ಯಾಸಕರು ಬೋಧಿಸುತ್ತಾರೆ. ಸೆಪ್ಟೆಂಬರ್‌ನಲ್ಲಿ ಅರ್ಧ ವಾರ್ಷಿಕ ಪರೀಕ್ಷೆಗಳು ನಡೆಯುತ್ತವೆ. ಪಾಠ ಕೇಳದೆ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಕಷ್ಟವಾಗುತ್ತದೆ. ಕೂಡಲೇ ಖಾಲಿ ಇರುವ ಉಪನ್ಯಾಸಕರ ಹುದ್ದೆ ಭರ್ತಿ ಮಾಡಿದರೆ ವಿದ್ಯಾರ್ಥಿಗಳ ಓದಿಗೆ ಅನುಕೂಲವಾಗುತ್ತದೆ. ಇಲ್ಲವಾದಲ್ಲಿ ಅವರ ಭವಿಷ್ಯ ಹಾಳಾಗಬಹುದು’ ಎಂದು ವಿವರಿಸಿದ್ದಾರೆ.

ಸಮಿತಿ ಜಿಲ್ಲಾ ಕಾರ್ಯದರ್ಶಿ ಎರ್ರಿಸ್ವಾಮಿ ಮುಂಡರಗಿ, ರವಿ ಮ್ಯಾಸನಕೇರಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT