ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಜ್ಞರ ಜತೆ ಸಭಾಪತಿ ನಾಯ್ಡು ಸಮಾಲೋಚನೆ

ಸಿಜೆಐ ದೀಪಕ್‌ ಮಿಶ್ರಾ ವಿರುದ್ಧ ವಾಗ್ದಂಡನೆ
Last Updated 23 ಏಪ್ರಿಲ್ 2018, 4:22 IST
ಅಕ್ಷರ ಗಾತ್ರ

ನವದೆಹಲಿ: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ವಾಗ್ದಂಡನೆಗೆ ವಿರೋಧ ಪಕ್ಷಗಳು ಸಲ್ಲಿಸಿದ ನಿಲುವಳಿ ನೋಟಿಸ್‌ಗೆ ಸಂಬಂಧಿಸಿದಂತೆ ರಾಜ್ಯಸಭೆಯ ಸಭಾಪತಿ ಎಂ.ವೆಂಕಯ್ಯ ನಾಯ್ಡು ಭಾನುವಾರ ತಜ್ಞರ ಜತೆ ಸಮಾಲೋಚನೆ ಪ್ರಕ್ರಿಯೆ ಆರಂಭಿಸಿದ್ದಾರೆ.

ಕಾನೂನು ತಜ್ಞರು ಮತ್ತು ಸಂಸದೀಯ ವ್ಯವಹಾರಗಳಲ್ಲಿ ಅನುಭವ ಹೊಂದಿದವರ ಸಲಹೆ, ಸೂಚನೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದಕ್ಕಾಗಿಯೇ ನಾಯ್ಡು ಅವರು ಹೈದರಾಬಾದ್‌ ಪ್ರವಾಸ ಮೊಟಕುಗೊಳಿಸಿ ರಾಜಧಾನಿಗೆ ಹಿಂದಿರುಗಿದ್ದಾರೆ.

ಅಟಾರ್ನಿ ಜನರಲ್‌ ಕೆ.ಕೆ. ವೇಣುಗೋಪಾಲ್‌, ಮಾಜಿ ಅಟಾರ್ನಿ ಜನರಲ್‌ ಕೆ. ಪ್ರಸನ್ನ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ ರೆಡ್ಡಿ, ನಿವೃತ್ತ ಕಾನೂನು ಕಾರ್ಯದರ್ಶಿ ಪಿ.ಕೆ. ಮಲ್ಹೋತ್ರ, ಲೋಕಸಭೆಯ ಮಾಜಿ ಕಾರ್ಯದರ್ಶಿ ಸುಭಾಷ್‌ ಕಶ್ಯಪ್‌ ಹಾಗೂ ಇತರರೊಂದಿಗೆ ನಾಯ್ಡು ಈಗಾಗಲೇ ಮಾತುಕತೆ ನಡೆಸಿದ್ದಾರೆ.

ನ್ಯಾ. ದೀಪಕ್‌ ಮಿಶ್ರಾ ಅವರ ವಿರುದ್ಧ ವಾಗ್ದಂಡನೆಗೆ ಅನುಮತಿ ನೀಡುವಂತೆ ಕೋರಿ ಗುಲಾಂ ನಬಿ ಅಜಾದ್‌ ನೇತೃತ್ವದ ನಿಯೋಗ ಈಚೆಗೆ ಮನವಿ ಸಲ್ಲಿಸಿತ್ತು.
**
ನ್ಯಾಯಾಂಗ ಇತಿಹಾಸದಲ್ಲಿ ಮುಖ್ಯ ನ್ಯಾಯಮೂರ್ತಿಯೊಬ್ಬರ ವಿರುದ್ಧ ಇದೇ ಮೊದಲ ಬಾರಿಗೆ ವಾಗ್ದಂಡನೆ ವಿಧಿಸುವ ನೋಟಿಸ್‌ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT