ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣದ ಥೈಲಿಯ ಮುಖಂಡರಿಗೆ ತಕ್ಕ ಪಾಠ

Last Updated 23 ಏಪ್ರಿಲ್ 2018, 7:07 IST
ಅಕ್ಷರ ಗಾತ್ರ

ಬಾಗೇಪಲ್ಲಿ: ಹಣದ ಥೈಲಿಗಳೊಂದಿಗೆ ಕ್ಷೇತ್ರಕ್ಕೆ ಬರುವ ರಾಜಕೀಯ ಮುಖಂಡರಿಗೆ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ತಿಳಿಸಿದರು.

ತಾಲ್ಲೂಕಿನ ಗೊರ್ತಪಲ್ಲಿ, ತಿಮ್ಮಂಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ವ್ಯಾಪಕ ಪ್ರಚಾರ ನಡೆಸಿದರು. ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈ ಭಾಗದ ಜನರ ನಾಡಿಮಿಡಿತ, ಸಾಂಸ್ಕತಿಕ, ಸಾಮಾಜಿಕ, ರಾಜಕೀಯ ಪರಿಚಯವಿಲ್ಲದ ಮುಖಂಡರು, ಚುನಾವಣಾ ದೃಷ್ಟಿಯಿಂದ ಬರುವರು. ನಂತರ ಗಂಟುಮೂಟೆ ಕಟ್ಟುವವರೆ ಹೊರತು, ಇಲ್ಲಿಯ ಜನರ ಸಮಸ್ಯೆಗೆ ಸ್ಪಂದಿಸುವುದಿಲ್ಲ ಎಂದು ಹೇಳಿದರು.

‘ಶಾಸಕನಾದ ನಂತರ ಸಮಾಜಸೇವೆಯ ಜೊತೆಗೆ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ನಾನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ’ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಆರ್. ನರೇಂದ್ರಬಾಬು, ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮೀನರಸಿಂಹಪ್ಪ, ಕೆಡಿಪಿ ಸದಸ್ಯ ಅಮರನಾಥರೆಡ್ಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ವೆಂಕಟರವಣಪ್ಪ, ಜಯಪ್ಪ, ಗುಟ್ಟಪಾಳ್ಯ ಶ್ರೀನಿವಾಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT