ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಕ್ಸೈಸ್‌ ಸುಂಕ ಕಡಿತ ಸಾಧ್ಯತೆ

55 ತಿಂಗಳ ಗರಿಷ್ಠ ಮಟ್ಟ ತಲುಪಿದ ಪೆಟ್ರೋಲ್‌ ದರ
Last Updated 23 ಏಪ್ರಿಲ್ 2018, 19:33 IST
ಅಕ್ಷರ ಗಾತ್ರ

ನವದೆಹಲಿ: ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರಿಕೆಯಾಗುತ್ತಲೇ ಇದೆ. ಹೀಗಾಗಿ ಕೇಂದ್ರ ಸರ್ಕಾರ ಎಕ್ಸೈಸ್‌ ಸುಂಕವನ್ನು ಪ್ರತಿ ಲೀಟರಿಗೆ ₹ 1.50 ಕಡಿಮೆ ಮಾಡುವ ಸಾಧ್ಯತೆ ಇದೆ.

ಆದರೆ, ಅದಕ್ಕೂ ಮುನ್ನ ಹಣಕಾಸು ಸಚಿವಾಲಯವು ಮೌಲ್ಯವರ್ಧಿತ ತೆರಿಗೆ (ವ್ಯಾಟ್‌) ದರ ತಗ್ಗಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಲಿದೆ.

ಇಂಧನಗಳ ಬೆಲೆ ಏರಿಕೆ ಪರಿಸ್ಥಿತಿಯ ಕುರಿತು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು, ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಸಂಸ್ಥೆಗಳ ಜತೆ  ಮಾತುಕತೆ ನಡೆಸಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ದರಗಳು ದಾಖಲೆ ಮಟ್ಟಕ್ಕೆ ಏರಿಕೆ ಕಂಡಿರುವುದರಿಂದ ಗ್ರಾಹಕರ ಮೇಲೆ ಇನ್ನಷ್ಟು ಹೊರೆ ಬೀಳದಂತೆ ತೈಲ ಸಂಸ್ಥೆಗಳಿಗೆ ಸರ್ಕಾರ ಸೂಚನೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರದಲ್ಲಿ ಆಗುತ್ತಿರುವ ವ್ಯತ್ಯಾಸಗಳನ್ನು ಸರ್ಕಾರ ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ. ಗ್ರಾಹಕರಿಗೆ ಇನ್ನಷ್ಟು ಹೊರೆಯಾಗಲು ಬಿಡುವುದಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಮವಾರ ನವದೆಹಲಿಯಲ್ಲಿ ಪೆಟ್ರೋಲ್‌ ದರ ಪ್ರತಿ ಲೀಟರಿಗೆ ₹ 74.50ಕ್ಕೆ ಅಂದರೆ 55 ತಿಂಗಳ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಡೀಸೆಲ್‌ ದರ ₹ 65.75ರ ದಾಖಲೆ ಮಟ್ಟವನ್ನು ತಲುಪಿದೆ. ಕಚ್ಚಾ ತೈಲ ಬೆಲೆ ಕಡಿಮೆಯಾಗದೇ ಇದ್ದರೆ ತಿಂಗಳಾಂತ್ಯದಲ್ಲಿ ಅಥವಾ ಮುಂದಿನ ತಿಂಗಳು ಕೇಂದ್ರ ಸರ್ಕಾರ ಸುಂಕ ಕಡಿತದ ನಿರ್ಧಾರಕ್ಕೆ ಬರಲಿದೆ ಎಂದು ಇನ್ನೊಬ್ಬ ಅಧಿಕಾರಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT