ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಣ್ಣಾವ್ರ ಹುಟ್ಟುಹಬ್ಬದಂದು ಶಿವಣ್ಣನ ’ರುಸ್ತುಂ’ ಸಿನಿಮಾ ಫಸ್ಟ್‌ಲುಕ್‌

Last Updated 23 ಏಪ್ರಿಲ್ 2018, 19:26 IST
ಅಕ್ಷರ ಗಾತ್ರ

ಬೆಂಗಳೂರು: ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅಭಿನಯಿಸಲಿರುವ ಹೊಸ ಸಿನಿಮಾ ‘ರುಸ್ತುಂ’ ಫಸ್ಟ್‌ಲುಕ್‌ ಡಾ. ರಾಜ್‌ ಕುಮಾರ್‌ ಅವರ ಹುಟ್ಟುಹಬ್ಬದಂದು(ಏ.24) ಬಿಡುಗಡೆಯಾಗಲಿದೆ.

ದಕ್ಷಿಣ ಭಾರತದ ಸಿನಿಮಾ ರಂಗದಲ್ಲಿ ಸಾಹಸ ನಿರ್ದೇಶಕರಾಗಿ ಹೆಸರುಮಾಡಿರುವ ರವಿವರ್ಮ ಅವರು ಈ ಸಿನಿಮಾವನ್ನು ನಿರ್ದೇಶಿಸಲಿದ್ದಾರೆ.

ಈಗಾಗಲೇ ಹಲವು ಸಿನಿಮಾಗಳಲ್ಲಿ ಪೊಲೀಸ್‌ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ಶಿವರಾಜ್‌ಕುಮಾರ್‌ ಈ ಚಿತ್ರದಲ್ಲಿ ಮತ್ತೆ ಖಾಕಿ ಧರಿಸಲಿದ್ದಾರೆ.

ಇತ್ತೀಚೆಗೆ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ’ಟಗರು’ ಸಿನಿಮಾದಲ್ಲಿಯೂ ಶಿವಣ್ಣ ಪೊಲೀಸ್‌ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಹಾಗಾಗಿ ’ರುಸ್ತುಂ’ ಕೂಡ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT