ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿನ್ ತೆಂಡೂಲ್ಕರ್ ಹುಟ್ಟುಹಬ್ಬಕ್ಕೆ ಟ್ವಿಟರ್‌ನಲ್ಲಿ ಶುಭಾಶಯಗಳ ಮಹಾಪೂರ

Last Updated 24 ಏಪ್ರಿಲ್ 2018, 2:37 IST
ಅಕ್ಷರ ಗಾತ್ರ

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಹಿರಿಯ ಹಾಗೂ ಮಾಜಿ ಆಟಗಾರ ಸಚಿನ್‌ ತೆಂಡೂಲ್ಕರ್ ಅವರ 45ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಮಂಗಳವಾರ ಟ್ವಟಿರ್‌ನಲ್ಲಿ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

ಕ್ರಿಕೆಟಿಗರಾದ ಪ್ರಗ್ಯಾನ್ ಓಜಾ, ಕೆ.ಎಲ್‌.ರಾಹುಲ್, ಆರ್‌.ಪಿ.ಸಿಂಗ್, ಬಾಕ್ಸರ್ ವಿಜೇಂದರ್ ಸಿಂಗ್‌ ಸೇರಿದಂತೆ ನೂರಾರು ಗಣ್ಯರು, ಅಸಂಖ್ಯಾತ ಅಭಿಮಾನಿಗಳು ಸಚಿನ್ ಅವರಿಗೆ ಶುಭಾಶಯ ಕೋರಿದ್ದಾರೆ.

ಸಚಿನ್ ಅವರ ಸ್ಮರಣೀಯ ಇನ್ನಿಂಗ್ಸ್‌ಗಳ ವಿಡಿಯೊ ತುಣುಕುಗಳು, ಅವರು ವಿಶ್ವಕಪ್ ಎತ್ತಿಹಿಡಿದಿರುವ ಫೋಟೊ, ಅವರ ಜತೆ ತೆಗೆಸಿಕೊಂಡಿರುವ ಫೋಟೊ ಹಾಗೂ ಅವರ ತಮಾಷೆಯ ಕ್ಷಣಗಳ ವಿಡಿಯೊಗಳನ್ನು ಹಂಚಿಕೊಳ್ಳುವ ಮೂಲಕ ಕ್ರೀಡಾಪಟುಗಳು, ಗಣ್ಯರು ಹಾಗೂ ಅಭಿಮಾನಿಗಳು ಶುಭಾಶಯ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT