ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯೇಂದ್ರ ಸ್ಪರ್ಧಿಸದಿರುವುದಕ್ಕೆ ಕಾರ್ಯಕರ್ತರ ಆಕ್ರೋಶ: ಬಿಜೆಪಿ ಕಚೇರಿ ಮೇಲೆ ಕಲ್ಲು ತೂರಾಟ

Last Updated 24 ಏಪ್ರಿಲ್ 2018, 8:20 IST
ಅಕ್ಷರ ಗಾತ್ರ

ಮೈಸೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದನ್ನು ತಡೆಹಿಡಿದಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ಬೆಂಬಲಿಗರು ಮಂಗಳವಾರವೂ ಪ್ರತಿಭಟನೆ ನಡೆಸಿದರು.

ಕಾರ್ಯಕರ್ತರು ಮೈಸೂರಿನ ಬಿಜೆಪಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದರು. ಇದರಿಂದ ಕಚೇರಿಯ ಕಿಟಕಿ ಗಾಜುಗಳು ಪುಡಿಯಾಗಿವೆ. ಪಕ್ಷದ ಮುಖಂಡರ ನಾಮಫಲಕ ಕಿತ್ತು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸಭೆ ನಡೆದ ನಗರದ ಪ್ರೆಸಿಡೆಂಟ್‌ ಹೋಟೆಲ್‌ ಮುಂಭಾಗದಲ್ಲಿ ನಾಯಕರ ವಿರುದ್ಧ ಧಿಕ್ಕಾರ ಕೂಗಿ ದಾಂದಲೆ ನಡೆಸಿದರು. ವಿಜಯೇಂದ್ರಗೆ ಟಿಕೆಟ್‌ ನೀಡುವಂತೆ ಒತ್ತಾಯಿಸಿ  ಬೆಂಗಳೂರು–ನೀಲಗಿರಿ ರಸ್ತೆ ತಡೆ ಹಿಡಿದು ಪ್ರತಿಭಟನೆ ನಡೆಸಿದ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

ಕೇಂದ್ರ ಸಚಿವ ಅನಂತಕುಮಾರ್‌ ವಿರುದ್ಧ ಕಾರ್ಯಕರ್ತರು ಧಿಕ್ಕಾರ ಕೂಗಿದರು. ವಿಜಯೇಂದ್ರಗೆ ಅನ್ಯಾಯ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅವರನ್ನು ಹೊರತುಪಡಿಸಿ ಯಾರನ್ನೇ ಕಣಕ್ಕಿಳಿಸಿದರೂ ಸೋಲಿಸುತ್ತೇವೆ. ಈ ಅನ್ಯಾಯದಿಂದಾಗಿ ವರುಣಾದಲ್ಲಿ ಜೆಡಿಎಸ್‌ ಪಕ್ಷಕ್ಕೆ ಬೆಂಬಲ ನೀಡುತ್ತೇವೆ. ಮೈಸೂರು ಭಾಗದಲ್ಲಿ ಬಿಜೆಪಿ ಸತ್ತಿದ್ದು, ಶ್ರದ್ಧಾಂಜಲಿ ಸಲ್ಲಿಸುತ್ತೇವೆ ಎಂದು ಘೋಷಣೆ ಕೂಗಿದರು. ಇವರು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವುದೂ ಅನುಮಾನ ಎಂದು ಹರಿಹಾಯ್ದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT