ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುತ್ತೂರು: ಕಟ್ಟಡ ನಿರ್ಮಾಣ ಸ್ಥಳದಲ್ಲಿ ಮಣ್ಣಿನ ಗುಡ್ಡೆ ಕುಸಿದು ಇಬ್ಬರು ಕಾರ್ಮಿಕರು ಸಾವು

Last Updated 24 ಏಪ್ರಿಲ್ 2018, 9:12 IST
ಅಕ್ಷರ ಗಾತ್ರ

ಮಂಗಳೂರು: ಪುತ್ತೂರು ನಗರದ ನೆಲ್ಲಿಕಟ್ಟೆ ಹತ್ತಿರವಿರುವ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಮಂಗಳವಾರ ಬೆಳಿಗ್ಗೆ ಆರು ಜನ ಕಟ್ಟಡ ಕಾರ್ಮಿಕರು 30 ಅಡಿ ಆಳದಲ್ಲಿ ಕೆಲಸ ಮಾಡುತ್ತಿದ್ದಾಗ ಬಸ್‌ನಿಲ್ದಾಣ ಪಕ್ಕದ ರಸ್ತೆ ಬದಿಯ ಮಣ್ಣಿನ ಗುಡ್ಡೆ ಕುಸಿದು ನಾಲ್ಕು ಜನ ಮಣ್ಣಿನ ಅಡಿಯಲ್ಲಿ ಸಿಕ್ಕಿ, ಇಬ್ಬರು ಮೃತಪಟ್ಟಿದ್ದಾರೆ.

ಕೂಡಲೇ ಸ್ಥಳೀಯರ ಸಹಕಾರ ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವೆ ಸಿಬ್ಬಂದಿ ಸಹಾಯದಿಂದ ಅಲ್ಲಿದ್ದ ಇಬ್ಬರು ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಮಂಗಳೂರಿನ ಜಲ್ಲಿಗುಡ್ಡೆಯ ಪದ್ಮನಾಭ(35), ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಅಡವಿಬಾವಿ ಗ್ರಾಮದ ಶಿವು ಅಲಿಯಾಸ್‌ ಶಿವಣ್ಣ(40) ಮೃತಪಟ್ಟವರು.

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಹಾಂತೇಶ್ ಹಾಗೂ ಯಶವಂತ ಎಂಬವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಟ್ಟಡ ನಿರ್ಮಾಣ ಸ್ಥಳವನ್ನು ಗಮನಿಸಿದಾಗ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೆ, ನಿರ್ಲಕ್ಷದಿಂದ ಕಟ್ಟಡ ನಿರ್ಮಾಣ ಮಾಡುತ್ತಿದ್ದಾರೆಂದು ಕಂಡುಬರುತ್ತದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT