ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಸ್ತಕ ಓದಿ ಜ್ಞಾನ ಹೆಚ್ಚಿಸಿಕೊಳ್ಳಿ 

ಶಿಡ್ಲಘಟ್ಟದ ಸಾರ್ವಜನಿಕ ಗ್ರಂಥಾಲಯದಲ್ಲಿ ವಿಶ್ವ ಪುಸ್ತಕ ದಿನಾಚರಣೆ: ಬಚ್ಚರೆಡ್ಡಿ ಸಲಹೆ
Last Updated 24 ಏಪ್ರಿಲ್ 2018, 9:05 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ಸಮಾಜದ ಪ್ರತಿಯೊಬ್ಬರು ಪುಸ್ತಕ ಓದುವ ಮೂಲಕ ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದು ಗ್ರಂಥಪಾಲಕ ಬಚ್ಚರೆಡ್ಡಿ ತಿಳಿಸಿದರು.

ನಗರದ ಸಾರ್ವಜನಿಕ ಗ್ರಂಥಾಲಯದಲ್ಲಿ ಸೋಮವಾರ ವಿಶ್ವ ಪುಸ್ತಕ ದಿನಾಚರಣೆ ಅಂಗವಾಗಿ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ.ಎಸ್.ಆರ್.ರಂಗನಾಥನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

 ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತ ಪುಸ್ತಕಗಳ ಸಮೇತ ಸುಮಾರು 28,405 ಪುಸ್ತಕಗಳಿವೆ ಪುಸ್ತಕಗಳ ಸಂಖ್ಯೆಗೆ ಅನುಗುಣವಾಗಿ ಓದುಗರು ಹೆಚ್ಚಾಗಬೇಕು. ಪುಸ್ತಕಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಗ್ರಂಥಾಲಯದಲ್ಲಿ ನಿತ್ಯ 28 ದಿನ ಪತ್ರಿಕೆಗಳು, 15ಕ್ಕೂ ಹೆಚ್ಚು ವಾರ ಮತ್ತು ಮಾಸಪತ್ರಿಕೆ ತರಿಸುತ್ತೇವೆ ಗ್ರಂಥಾಲಯದ ಸದಸ್ಯರ ಸಂಖ್ಯೆ ಮಾತ್ರ 1,644 ಇದೆ. ಈ ಸಂಖ್ಯೆ ಹೆಚ್ಚಾಗಬೇಕಿದೆ. ನಾಗರಿಕರು ಈ ನಿಟ್ಟಿನಲ್ಲಿ ಸದಸ್ಯತ್ವ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಗ್ರಂಥಾಲಯ ಸಹಾಯಕ ಶ್ರೀನಿವಾಸಯ್ಯ ಮಾತನಾಡಿ, ಪುಸ್ತಕಗಳು ಜ್ಞಾನ ದೀವಿಗೆ ಇದ್ದಂತೆ. ಅದನ್ನು ನಾವು ಹೆಚ್ಚು ಓದಿದಷ್ಟು ನಮ್ಮ ಜ್ಞಾನ ವಿಸ್ತಾರಗೊಳ್ಳುತ್ತದೆ ಮತ್ತು ಅರಿವಿನ ವ್ಯಾಪ್ತಿ ಹೆಚ್ಚುತ್ತದೆ. ಪುಸ್ತಕದಿಂದ ಸಿಗುವ ಜ್ಞಾನಕ್ಕೆ ಯಾವುದೂ ಸಮಾನವಲ್ಲ ಎಂದು ತಿಳಿಸಿದರು.

ಗ್ರಂಥಾಲಯ ಸಹಾಯಕಿ ಬಾಂಧವ್ಯ, ಓದುಗರಾದ ನಯಾಜ್‌, ಅಮಾನುಲ್ಲಾಖಾನ್‌, ವೆಂಕಟೇಶ್‌, ನಾಗೇಶ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT