ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈಗಾರಿಕಾ ನೀತಿ ಗ್ರಾಮೀಣ ಪ್ರದೇಶಕ್ಕೆ ಆದ್ಯತೆ: ಪ್ರಭು

Last Updated 24 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಚಂಡೀಗಡ: ‘ಹೊಸ ಕೈಗಾರಿಕಾ ನೀತಿಯನ್ನು ಅಂತಿಮಗೊಳಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕೈಗಾರಿಕಾ ಘಟಕಗಳ ಸ್ಥಾಪನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ’ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಸುರೇಶ್‌ ಪ್ರಭು ತಿಳಿಸಿದ್ದಾರೆ.

ಗುರುಗ್ರಾಮದಲ್ಲಿ ಪಂಚಾಯತಿ ರಾಜ್ ದಿವಸ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಶೀಘ್ರವೇ ಹೊಸ ನೀತಿ ಘೋಷಣೆಯಾಗಲಿದೆ’ ಎಂದು ಹೇಳಿದ್ದಾರೆ.

‘ಸಣ್ಣ ಕೈಗಾರಿಕೆಗಳ ಸ್ಥಾಪನೆಯ ಮೂಲಕ ಜನರ ಜೀವನ ಮಟ್ಟ ಸುಧಾರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಥಾಪನೆ ಮೂಲಕ ಸ್ವ ಸಹಾಯ ಗುಂಪುಗಳು, ಸಹಕಾರಿ ಸಂಸ್ಥೆಗಳನ್ನು ಅದರ ಸಂಪರ್ಕಕ್ಕೆ ತರಲಾಗುವುದು. ಆ ಮೂಲಕ ಜಾಗತಿಕ ಮಾರುಕಟ್ಟೆಗೆ ತೆರೆದುಕೊಳ್ಳುವಂತೆ ವ್ಯವಸ್ಥೆ ಮಾಡಲಾಗುವುದು’ ಎಂದು ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT