ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗರಿಷ್ಠ ಮಟ್ಟದಲ್ಲಿ ವಹಿವಾಟು ಅಂತ್ಯ

Last Updated 24 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಮುಂಬೈ: ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) ಸತತ ಎರಡನೇ ದಿನವೂ ಗರಿಷ್ಠ ಮಟ್ಟದಲ್ಲಿ ವಹಿವಾಟು ಅಂತ್ಯವಾಗಿದೆ.

ಮಂಗಳವಾರದ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 166 ಅಂಶ ಏರಿಕೆ ಕಂಡು, 34,616 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 30 ಅಂಶ ಏರಿಕೆಯಾಗಿ 10,614 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿದೆ.

ರೂಪಾಯಿ ಮೌಲ್ಯದಲ್ಲಿನ ಏರಿಕೆ, ದೇಶಿ ಸಾಂಸ್ಥಿಕ ಹೂಡಿಕೆದಾರರಿಂದ ನಿರಂತರ ಖರೀದಿ ಹಾಗೂ ತ್ರೈಮಾಸಿಕದಲ್ಲಿ ಕಂಪನಿಗಳ ಆರ್ಥಿಕ ಸಾಧನೆ ನಿರೀಕ್ಷಿತ ಮಟ್ಟದಲ್ಲಿ ಇರುವುದರ ಫಲವಾಗಿ ಷೇರುಪೇಟೆ ವಹಿವಾಟು ಏರುಮುಖವಾಗಿದೆ ಎಂದು ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

ಅಮೆರಿಕವು ಇರಾನ್‌ ಮೇಲೆ ಹೇರಿರುವ ನಿರ್ಬಂಧ ತೆಗೆದು ಹಾಕಲಿದೆ ಎನ್ನುವ ನಿರೀಕ್ಷೆ ಹೆಚ್ಚಾಗಿದೆ. ಹೀಗಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಬ್ಯಾರೆಲ್‌ಗೆ 75 ಡಾಲರ್‌ಗೆ ಏರಿಕೆ ಆಗಿದೆ. ಇದು 2014ರ ಬಳಿಕ ಅತ್ಯಂತ ಗರಿಷ್ಠ ಮಟ್ಟವಾಗಿದೆ. ಈ ಸುದ್ದಿಯು ಜಾಗತಿಕ ಷೇರುಪೇಟೆಗಳಲ್ಲಿ ವಹಿವಾಟು ಏರಿಕೆ ಕಾಣುವಂತೆ ಮಾಡಿದೆ.

‘ತೈಲ ಬೆಲೆ ಏರಿಕೆಯಾಗುತ್ತಿರುವುದರಿಂದ ಹೂಡಿಕೆದಾರರು ಎಚ್ಚರಿಕೆಯಿಂದ ವಹಿವಾಟು ನಡೆಸಲಿದ್ದಾರೆ. ಆದರೆ, ತ್ರೈಮಾಸಿಕದಲ್ಲಿ ಕಂಪನಿಗಳ ಆರ್ಥಿಕ ಸಾಧನೆಯಲ್ಲಿ ಏರಿಕೆ ಕಂಡುಬಂದರೆ ಮಾರುಕಟ್ಟೆ ದಿಕ್ಕು ಬದಲಾಗುವು ಸಾಧ್ಯತೆ ಇದೆ’ ಎಂದು ಜಿಯೋಜಿತ್‌ ಫೈನಾನ್ಶಿಯಲ್ ಸರ್ವೀಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT