ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪ್ರಾಪ್ತೆ ಅತ್ಯಾಚಾರ ಪ್ರಕರಣ: ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ

Last Updated 25 ಏಪ್ರಿಲ್ 2018, 9:40 IST
ಅಕ್ಷರ ಗಾತ್ರ

ಜೋಧಪುರ: 2013ರ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಾರಾಂ ಬಾಪು(77)ಗೆ ಜೋಧಪುರ ವಿಶೇಷ ನ್ಯಾಯಾಲಯ ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ಪ್ರಕರಣದ ವಿಚಾರಣೆ ನಡೆಸಿ ಅಸಾರಾಂ ಬಾಪು ತಪ್ಪಿತಸ್ಥ ಎಂದು ತೀರ್ಪು ನೀಡಿದ್ದ ಜೋಧಪುರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನ್ಯಾಯಾಲಯ ಶಿಕ್ಷೆ ಪ್ರಮಾಣ ಪ್ರಕಟಿಸಿದೆ. ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ ಹಾಗೂ ಶಿಲ್ಪಿ ಮತ್ತು ಶರದ್‌ಗೆ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದೆ.

ಇನ್ನಿಬ್ಬರು ಆರೋಪಿಗಳಾದ ಶಿವ ಮತ್ತು ಪ್ರಕಾಶ್‌ರನ್ನು ಖುಲಾಸೆಗೊಳಿಸಲಾಗಿದೆ.

ಪ್ರಕರಣದ ಹಿನ್ನೆಲೆ: 2013ರ ಆಗಸ್ಟ್ 15ರಂದು ಅಸಾರಾಂ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಛಿಂದ್ವಾರದಲ್ಲಿರುವ ಅಸಾರಾಂ ಆಶ್ರಮದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಉತ್ತರಪ್ರದೇಶದ ಷಹಜಹಾನ್‌ಪುರದ ಬಾಲಕಿ ದೂರು ನೀಡಿದ್ದಳು.

ದೂರು ಆಧರಿಸಿ 2013ರ ಸೆಪ್ಟೆಂಬರ್ 1ರಂದು ಇಂದೋರ್‌ನಲ್ಲಿ ಅಸಾರಾಂ ಅವರನ್ನು ಬಂಧಿಸಿ ಜೋಧಪುರಕ್ಕೆ ಕರೆತರಲಾಗಿತ್ತು. 2013ರ ಸೆಪ್ಟೆಂಬರ್ 2 ರಿಂದ ಅಸಾರಾಂ ನ್ಯಾಯಾಂಗ ವಶದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT