ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಡುಗು– ಸಿಡಿಲು ಸಹಿತ ಧಾರಾಕಾರ ಮಳೆ

Last Updated 25 ಏಪ್ರಿಲ್ 2018, 9:57 IST
ಅಕ್ಷರ ಗಾತ್ರ

ಕುಶಾಲನಗರ: ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಮಂಗಳವಾರ ಮಧ್ಯಾಹ್ನ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಸುರಿದಿದೆ.

ಮಧ್ಯಾಹ್ನ 3 ಗಂಟೆಗೆ ಆರಂಭಗೊಂಡ ಮಳೆ ನಂತರ ಗುಡುಗು ಮಿಂಚು ಸಹಿತ ಜೋರಾಗಿ ಸತತ
ಎರಡು ತಾಸಿಗೂ ಹೆಚ್ಚು ಕಾಲ ಸುರಿಯಿತು. ಗುಡುಗು ಮಿಂಚು ಆರ್ಭಟಕ್ಕೆ ಜನತೆ ಬೆಚ್ಚಿಬಿದ್ದರು. ರಭಸದಿಂದ ಗಾಳಿ ಬಿಸಿದ ಕಾರಣ ಕೆಲವು ಕಡೆ ಮರಗಳ ಕೊಂಬೆ ಹಾಗೂ ತೆಂಗಿನ ಮರದ ರಂಬೆ ಕಳಚಿ ಬಿದ್ದವು. ಗಾಳಿ ಮಳೆಯ ಆರ್ಭಟ ಜೋರಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಲಾಯಿತು.

ನಿರಂತರ ಬಿದ್ದ ಮಳೆಯಿಂದ ಚರಂಡಿಯಲ್ಲಿ ನೀರು ತುಂಬಿ ರಸ್ತೆ ಮೇಲೆ ಹರಿಯಿತು. ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು. ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳೆ ನೀರು ನುಗ್ಗಿತು. ಇಡೀ ವಾತಾವರಣವೇ ತಂಪಾಗಿ ಶೀತಮಯ ಗಾಳಿ ಬೀಸಲು ಆರಂಭಿಸಿತು.

ಮಳೆ ಕಾದು ನಿಂತಿದ್ದ ಭೂಮಿಯನ್ನು ಸ್ವಲ್ಪಮಟ್ಟಿಗೆ ತಣ್ಣಗಾಗಿಸಿತು. ಮುಳ್ಳುಸೋಗೆ ಗ್ರಾ.ಪಂ. ವ್ಯಾಪ್ತಿಯ ಗೊಂದಿಬಸವನಹಳ್ಳಿ, ಕೂಡ್ಲೂರು ಮಂಟಿ, ಚಿಕ್ಕಹೊಸೂರು ವ್ಯಾಪ್ತಿಯಲ್ಲಿ ಮರಗಳು ಧರೆಗೆ ಉರುಳಿವೆ. ಕೆಲವು ಕಡೆಗಳಲ್ಲಿ ವಿದ್ಯುತ್ ಕಂಬಗಳಿಗೂ ಹಾನಿಯಾಗಿರುವ ಕಾರಣ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ. ಮುಳ್ಳುಸೋಗೆ, ಗುಮ್ಮನಕೊಲ್ಲಿ, ಕೂಡುಮಂಗಳೂರು, ಕೂಡಿಗೆ, ಹೆಬ್ಬಾಲೆ, ಅಳುವಾರ, ಸಿದ್ದಲಿಂಗಪುರ, ಗುಡ್ಡೆಹೊಸೂರು ಸೇರಿದಂತೆ ಅನೇಕ ಗ್ರಾಮಗಳಲ್ಲಿ ಜೋರಾಗಿ ಮಳೆ ಸುರಿದೆ.

ಸಾಧಾರಣ ಮಳೆ

ವಿರಾಜಪೇಟೆ: ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಂಗಳವಾರ ಸಂಜೆಯ ವೇಳೆಗೆ ಗುಡುಗು ಸಹಿತ ಸಾಧಾರಣ ಮಳೆ ಸುರಿಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT