ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಂಡೇಲಿ ವನ್ಯಧಾಮದಲ್ಲಿ ನಿರಂತರ ಜೆಸಿಬಿ ಸದ್ದು

ನಿರ್ದೇಶಕರ ವರ್ಗಾವಣೆಗೆ ಆಗ್ರಹ
Last Updated 25 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಆಡಳಿತಾತ್ಮಕ ವ್ಯಾಪ್ತಿಗೆ ಬರುವ ದಾಂಡೇಲಿ ವನ್ಯಧಾಮದ ಕ್ಯಾಸಲ್‌ರಾಕ್ ವನ್ಯಜೀವಿ ವಲಯದ ಕುವೇಶಿ ಬಳಿ ಜೆಸಿಬಿ ಸಹಾಯದಿಂದ ಅನಧಿಕೃತ ರಸ್ತೆ ಕಾಮಗಾರಿ ಮಾಡಲಾಗುತ್ತಿದೆ. ಇದರಿಂದ  ವನ್ಯಜೀವಿಗಳ ನೆಮ್ಮದಿಗೆ ಮತ್ತೆ ಆತಂಕ ಎದುರಾಗಿದೆ ಎಂದು ವನ್ಯಜೀವಿ ಕಾರ್ಯಕರ್ತರು ದೂರಿದ್ದಾರೆ.

‘ಇಲ್ಲಿನ ಅನಧಿಕೃತ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸರಣಿ ದೂರುಗಳನ್ನು ನೀಡಿದ್ದರೂ, ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಸ್ಪಂದಿಸಿಲ್ಲ. ಕಾಳಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರಂತೂ ಕಠಿಣ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ. ನಿರ್ದೇಶಕ ಪಾಲಯ್ಯ ಅವರನ್ನು ವರ್ಗಾವಣೆ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.

ಹುಲಿ ಸಂರಕ್ಷಿತ ಪ್ರದೇಶ, ರಾಷ್ಟ್ರೀಯ ಉದ್ಯಾನ, ವನ್ಯಧಾಮಗಳಲ್ಲಿ ಯಾವುದೇ ಅರಣ್ಯೇತರ ಚಟುವಟಿಕೆಗಳನ್ನು ಕೈಗೊಳ್ಳಲು ಕೇಂದ್ರ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯದ ಅನುಮತಿ ಅತ್ಯಗತ್ಯ. ಇಷ್ಟಾದರೂ ಇಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ವೇಳೆ ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣಾ ಕಾಯ್ದೆಗಳ ಪಾಲನೆ ಆಗಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT