ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂಬ್ರಿಜ್ ಅನಲಿಟಿಕಾ, ಫೇಸ್‌ಬುಕ್‌ಗೆ ನೋಟಿಸ್‌

Last Updated 25 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಮಾಹಿತಿ ಕಳ್ಳತನಕ್ಕೆ ಸಂಬಂಧಿಸಿದಂತೆ ಇಂಗ್ಲೆಂಡ್‌ನ ರಾಜಕೀಯ ಸಲಹಾ ಸಂಸ್ಥೆ ಕೇಂಬ್ರಿಜ್ ಅನಲಿಟಿಕಾ ಮತ್ತು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ಗೆ ಕೇಂದ್ರ ಸರ್ಕಾರ ಬುಧವಾರ ಎರಡನೇ ನೋಟಿಸ್‌ ಕಳಿಸಿದೆ.

ಮಾಹಿತಿ ಸೋರಿಕೆಗೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗಳಿಗೆ ಮೇ10ರ ಒಳಗಾಗಿ ವಿವರಣೆ ನೀಡುವಂತೆ ಎರಡೂ ಸಂಸ್ಥೆಗಳಿಗೆ ಗಡುವು ನೀಡಲಾಗಿದೆ.

ಈ ಮೊದಲು ನೀಡಿದ್ದ ನೋಟಿಸ್‌ಗೆ ಈ ತಿಂಗಳ ಮೊದಲ ವಾರದಲ್ಲಿ ಎರಡೂ ಸಂಸ್ಥೆಗಳು ಉತ್ತರ ನೀಡಿದ್ದವು. ಆದರೆ ಈ ಮೊದಲು ನೀಡಿದ್ದ ನೋಟಿಸ್‌ಗೆ ಕೇಂಬ್ರಿಜ್ ಅನಲಿಟಿಕಾ ನೀಡಿದ್ದ ವಿವರಣೆ ಸಾಕಾಗುವುದಿಲ್ಲ ಎಂದು ಹೇಳಿರುವ ಕೇಂದ್ರ, ಮತ್ತಷ್ಟು ಪೂರಕ ಮಾಹಿತಿಗಳನ್ನು ಕೋರಿದೆ.

ಭವಿಷ್ಯದಲ್ಲಿ ಮಾಹಿತಿ ಸೋರಿಕೆಯಾಗದಂತೆ ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡುವಂತೆ ಫೇಸ್‌ಬುಕ್‌ಗೆ ಸೂಚಿಸಿದೆ.

ಮೊದಲ ನೋಟಿಸ್‌ಗೆ ಉತ್ತರಿಸಿದ್ದ ಫೇಸ್‌ಬುಕ್‌, 5.62 ಲಕ್ಷ ಭಾರತೀಯ ಬಳಕೆದಾರ ಮಾಹಿತಿ ಸೋರಿಕೆಯಾಗಿದೆ ಎಂದು ಒಪ್ಪಿಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT