ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ ಪ್ರಕರಣ: ಕಣ್ಣೀರಿಟ್ಟ ಅಮುಲ್ ಬಾಲಕಿ

Last Updated 25 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಅಹಮದಾಬಾದ್: ಜಮ್ಮು ಮತ್ತು ಕಾಶ್ಮೀರದ ಕಠುವಾದಲ್ಲಿ ಮತ್ತು ಉತ್ತರ ಪ್ರದೇಶದ ಉನ್ನಾವ್‌ನಲ್ಲಿ ಈಚೆಗೆ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಗುಜರಾತ್‌ನ ಅಮುಲ್‌ ಡೇರಿಯ ಫೇಸ್‌ಬುಕ್‌ ಪುಟದಲ್ಲಿ ಪ್ರಕಟಿಸಿರುವ ವ್ಯಂಗ್ಯಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಫೇಸ್‌ಬುಕ್‌ ಹಾಗೂ ಟ್ವಿಟರ್‌ನಲ್ಲಿ ನೂರಾರು ಮಂದಿ ಇದನ್ನು ಶೇರ್ ಮಾಡಿದ್ದು, ಬೆಂಬಲಿಸಿ ಪ್ರತಿಕ್ರಿಯೆ ನೀಡಿದ್ದಾರೆ.

‘ಅಮುಲ್‌ ಸಕಾಲಿಕ: ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಖಂಡನೆ’ ಎಂಬ ಶೀರ್ಷಿಕೆ ಅಡಿ ಬಾಲಕಿ ಕಣ್ಣಿರಿಡುತ್ತಿರುವ ಚಿತ್ರವನ್ನು ಅಮುಲ್ ಫೇಸ್‌ಬುಕ್ ಪುಟದಲ್ಲಿ ಏಪ್ರಿಲ್ 17ರಂದು ಪ್ರಕಟಿಸಲಾಗಿದೆ. ಚಿತ್ರಕ್ಕೆ ‘ಝರಾ ಆಂಖೋ ಮೇ ಬರ್ಲೊ ಪಾನಿ’ ಎಂಬ ಶೀರ್ಷಿಕೆಯನ್ನೂ ನೀಡಲಾಗಿದೆ. ಇದನ್ನು 900ಕ್ಕೂ ಹೆಚ್ಚು ಮಂದಿ ಶೇರ್ ಮಾಡಿದ್ದು, 90ಕ್ಕೂ ಹೆಚ್ಚು ಜನ ಪ್ರತಿಕ್ರಿಯಿಸಿದ್ದಾರೆ. 8 ಸಾವಿರಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಟ್ವಿಟರ್‌ನಲ್ಲಿಯೂ ನೂರಾರು ಮಂದಿ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT