ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದುವೆ ಆಗುವುದಾಗಿ ನಂಬಿಸಿ ಗರ್ಭಿಣಿ ಮಾಡಿದ

ಖಾಸಗಿ ಕಂಪನಿ ವ್ಯವಸ್ಥಾಪಕನ ವಿರುದ್ಧ ಎಫ್‌ಐಆರ್‌
Last Updated 25 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮದುವೆ ಆಗುವುದಾಗಿ ನಂಬಿಸಿ ಯುವತಿಯೊಬ್ಬರನ್ನು ಗರ್ಭಿಣಿಯಾಗಿಸಿದ ಆರೋಪದಡಿ ಇಂಜಮಾಮ್‌ ಉಲ್‌ ಹಕ್‌ ಎಂಬಾತನ ವಿರುದ್ಧ ಕೆ.ಜೆ.ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂಬೈ ನಿವಾಸಿಯಾದ ಸಂತ್ರಸ್ತೆ ನೀಡಿರುವ ದೂರಿನನ್ವಯ ಆರೋಪಿ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದೇವೆ. ಆರೋಪಿ ಹಾಗೂ ಆತನ ಮನೆಯವರು ಸದ್ಯ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

ಎರಡು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ಯುವತಿ, ಖಾಸಗಿ ಕಂಪನಿಯೊಂದರಲ್ಲಿ ಕೆಲಸಕ್ಕೆ ಸೇರಿದ್ದರು. ಆರೋಪಿ ಸಹ ಕಂಪನಿಯೊಂದರಲ್ಲಿ ವ್ಯವಸ್ಥಾಪಕನಾಗಿದ್ದ. ತನ್ನ ಸ್ನೇಹಿತೆಯೊಬ್ಬರ ಮೂಲಕ ಆರೋಪಿಗೆ ಸಂತ್ರಸ್ತೆಯ ಪರಿಚಯವಾಗಿತ್ತು. ನಂತರ, ಅವರಿಬ್ಬರು ಪರಸ್ಪರ ಮೊಬೈಲ್ ನಂಬರ್‌ ವಿನಿಮಯ ಮಾಡಿಕೊಂಡಿದ್ದರು. ಕ್ರಮೇಣ ಪ್ರೀತಿಸಲು ಆರಂಭಿಸಿದ್ದರು.

ಮದುವೆ ಆಗುವುದಾಗಿ ಹೇಳಿದ್ದ ಆರೋಪಿ, ಜೆ.ಪಿ. ನಗರದಲ್ಲಿ ಪ್ರತ್ಯೇಕ ಮನೆ ಮಾಡಿ ಯುವತಿ ಜತೆ ನೆಲೆಸಿದ್ದ. ಅದೇ ವೇಳೆ ಸಂತ್ರಸ್ತೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ. ಎರಡು ತಿಂಗಳ ಹಿಂದೆ ಯುವತಿ ಗರ್ಭ ಧರಿಸಿದ್ದರು. ಈ ವಿಷಯವನ್ನು ಇಂಜಮಾಮ್‌ಗೆ ತಿಳಿಸಿದ್ದರು.

ಆಗ, ಯುವತಿಯನ್ನು ಕೆ.ಜೆ. ಹಳ್ಳಿಯಲ್ಲಿದ್ದ ತನ್ನ ಮನೆಗೆ ಆರೋಪಿ ಕರೆದೊಯ್ದಿದ್ದ. ಆತನ ಕುಟುಂಬದವರು, ಯುವತಿ ಮೇಲೆ ಹಲ್ಲೆ ಮಾಡಿ ಬೆದರಿಕೆವೊಡ್ಡಿದ್ದರು. ಅದರಿಂದ ನೊಂದ ಸಂತ್ರಸ್ತೆ, ಠಾಣೆಗೆ ಬಂದು ದೂರು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT