ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸುಪ್ರೀಂ’ ನ್ಯಾಯಮೂರ್ತಿ ನೇಮಕ: ನ್ಯಾ.ಕೆ.ಎಂ.ಜೋಸೆಫ್‌ ಹೆಸರು ಶಿಫಾರಸು ಮರುಪರಿಶೀಲಿಸಲು ಕೊಲಿಜಿಯಂಗೆ ಕೇಂದ್ರ ಮನವಿ

Last Updated 26 ಏಪ್ರಿಲ್ 2018, 11:09 IST
ಅಕ್ಷರ ಗಾತ್ರ

ನವದೆಹಲಿ: ಉತ್ತರಾಖಂಡ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಕೆ.ಎಂ.ಜೋಸೆಫ್‌ ಅವರನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ಹುದ್ದೆಗೆ ನೇಮಿಸುವ ಶಿಫಾರಸನ್ನು ಮರುಪರಿಶೀಲಿಸುವಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ ಕೊಲಿಜಿಯಂನ್ನು ಕೋರಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಹಿರಿಯ ವಕೀಲೆ ಇಂದು ಮಲ್ಹೊತ್ರಾ ಅವರ ನೇಮಕಕ್ಕೆ ಅನುಮೋದನೆ ನೀಡಿ, ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಕೆ.ಎಂ. ಜೋಸೆಫ್‌ ಅವರ ನೇಮಕವನ್ನು ಕೇಂದ್ರ ಸರ್ಕಾರ ತಡೆಹಿಡಿದಿತ್ತು. ಕೆ.ಎಂ.ಜೋಸೆಫ್‌ ನೇಮಕ ಶಿಫಾರಸು ಮರುಪರಿಶೀಲಿಸುವಂತೆ ಗುರುವಾರ ಕೊಲಿಜಿಯಂಗೆ ಮನವಿ ಮಾಡಿದೆ.

‘ದೇಶದಲ್ಲಿ ನ್ಯಾಯಮೂರ್ತಿಗಳ ಹಿರಿತನ ಪಟ್ಟಿಯಲ್ಲಿ ಜೋಸೆಫ್‌ ಅವರು 42ನೇ ಸ್ಥಾನದಲ್ಲಿದ್ದಾರೆ. ಇವರಿಗಿಂತಲೂ 11 ಜನ ಹಿರಿಯ ಮುಖ್ಯ ನ್ಯಾಯಮೂರ್ತಿಗಳಿದ್ದಾರೆ’ ಎಂದು ಕೇಂದ್ರ ಕಾನೂನು ಸಚಿವ ರವಿ ಶಂಕರ್‌ ಪ್ರಸಾದ್‌ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಅವರಿಗೆ ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ.

ಕೇಂದ್ರ ಸರ್ಕಾರದ ನಡೆಯ ಕುರಿತು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್‌ ವಕೀಲರ ಸಂಘ, ನ್ಯಾಯಾಂಗದಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT