ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಜುನ ‍ಪ್ರಶಸ್ತಿಗೆ ಬಿಧುರಿ, ಸೋನಿಯಾ ಹೆಸರು

Last Updated 26 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಕಂಚು ಜಯಿಸಿದ್ದ ಗೌರವ್‌ ಬಿಧುರಿ ಮತ್ತು ಏಷ್ಯಾ ಕ್ರೀಡಾಕೂಟದಲ್ಲಿ ಬೆಳ್ಳಿಯ ಪದಕಕ್ಕೆ ಕೊರಳೊಡ್ದಿದ್ದ ಸೋನಿಯಾ ಲಾಥರ್‌ ಅವರ ಹೆಸರುಗಳನ್ನು ಭಾರತ ಬಾಕ್ಸಿಂಗ್‌ ಫೆಡರೇಷನ್‌ (ಬಿಎಫ್‌ಐ) ಗುರುವಾರ ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಿದೆ.

‘ಅರ್ಜುನ ಪ್ರಶಸ್ತಿಗೆ ಗೌರವ್‌ ಮತ್ತು ಸೋನಿಯಾ ಅವರ ಹೆಸರುಗಳನ್ನು ಶಿಫಾರಸು ಮಾಡಿದ್ದೇವೆ. ಮಹಿಳಾ ಬಾಕ್ಸಿಂಗ್‌ ತಂಡದ ಮುಖ್ಯ ಕೋಚ್‌ ಶಿವ ಸಿಂಗ್‌ ಮತ್ತು ಸಹಾಯಕ ಕೋಚ್‌ಗಳಾದ ಭಾಸ್ಕರ್‌ ಭಟ್‌ ಹಾಗೂ ಸಂಧ್ಯಾ ಗುರಂಗ್‌ ಅವರ ಹೆಸರುಗಳನ್ನು ದ್ರೋಣಾಚಾರ್ಯ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ’ ಎಂದು ಬಿಎಫ್‌ಐ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

56 ಕೆ.ಜಿ. ಬಾಂಥಮ್‌ವೇಟ್‌ ವಿಭಾಗದಲ್ಲಿ ಸ್ಪರ್ಧಿಸುವ ಗೌರವ್‌, ಹೋದ ವರ್ಷ ಹ್ಯಾಮ್‌ಬರ್ಗ್‌ನಲ್ಲಿ ನಡೆದಿದ್ದ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ಜಯಿಸಿದ್ದರು. ಗಾಯದ ಕಾರಣ ಅವರು ಗೋಲ್ಡ್‌ ಕೋಸ್ಟ್‌ನಲ್ಲಿ ನಡೆದಿದ್ದ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಭಾಗವಹಿಸಿರಲಿಲ್ಲ.

57 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸುವ ಸೋನಿಯಾ, ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಫೈನಲ್‌ ಪ್ರವೇಶಿಸಿದ ಭಾರತದ ಎರಡನೇ ಬಾಕ್ಸರ್‌ ಎಂಬ ಹಿರಿಮೆ ಹೊಂದಿದ್ದಾರೆ.‌

ಹೋದ ವರ್ಷ ಬಾಕ್ಸಿಂಗ್‌ ವಿಭಾಗದಲ್ಲಿ ಎಲ್‌.ದೇವೇಂದ್ರೊ ಸಿಂಗ್‌ ಅವರಿಗೆ ಅರ್ಜುನ ಪ್ರಶಸ್ತಿ ಸಿಕ್ಕಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT