ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಗೆ ಪೂಜಾರಿ ಹಾಜರು

Last Updated 27 ಏಪ್ರಿಲ್ 2018, 4:31 IST
ಅಕ್ಷರ ಗಾತ್ರ

ಮಂಗಳೂರು: ಇಲ್ಲಿನ ಟಿ.ಎಂ.ಎ. ಪೈ ಸಭಾಂಗಣದಲ್ಲಿ ಶುಕ್ರವಾರ ನಡೆಯುತ್ತಿರುವ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಸಮಾರಂಭಕ್ಕೆ ಪಕ್ಷದ ಹಿರಿಯ ನಾಯಕ ಬಿ.ಜನಾರ್ದನ ಪೂಜಾರಿ ಹಾಜರಾಗಿದ್ದಾರೆ.

ಅನಾರೋಗ್ಯದ ಕಾರಣದಿಂದ ಪೂಜಾರಿ ಹಲವು ದಿನಗಳಿಂದ ವಿಶ್ರಾಂತಿ ಪಡೆಯುತ್ತಿದ್ದಾರೆ. ಪ್ರಣಾಳಿಕೆ ಬಿಡುಗಡೆ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಾಲ್ಗೊಳ್ಳುತ್ತಿರುವುದರಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ಮುಖಂಡರು ಪೂಜಾರಿ ಅವರಿಗೆ ಮನವಿ ಮಾಡಿದ್ದರು.

ಪೂಜಾರಿ ಸಭಾಂಗಣ ಪ್ರವೇಶಿಸುತ್ತಿದ್ದಂತೆ ಎದ್ದು ನಿಂತು ಗೌರವ ಸೂಚಿಸಿದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು, ಹಿರಿಯ ನಾಯಕನಿಗೆ ಜೈಕಾರ ಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT