ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹಕಾರ ಸಂಘಗಳಲ್ಲಿ ವೃತ್ತಿಪರತೆ ಅಗತ್ಯ

ಸಹಾಯಕ ನಿರ್ದೇಶಕ ತುಳಸಿರಾಮ ಅಭಿಮತ
Last Updated 30 ಆಗಸ್ಟ್ 2018, 13:48 IST
ಅಕ್ಷರ ಗಾತ್ರ

ಬೀದರ್‌: ‘ವೃತ್ತಿಪರತೆ ಅಳವಡಿಸಿಕೊಳ್ಳದಿದ್ದರೆ ಗ್ರಾಮೀಣ ಪ್ರದೇಶದಲ್ಲಿ ಸಹಕಾರ ಪತ್ತಿನ ಸಂಘಗಳು ಬೆಳೆಯುವುದು ಕಷ್ಟ. ಸಹಕಾರ ಸಂಘಗಳ ಪ್ರತಿನಿಧಿಗಳು ವೃತ್ತಿಪರತೆ, ಶಿಸ್ತು ಹಾಗೂ ಬದ್ಧತೆಯನ್ನು ಮೈಗೂಡಿಸಿಕೊಳ್ಳಬೇಕು’ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಹಾಯಕ ನಿರ್ದೇಶಕ ತುಳಸಿರಾಮ ಲಾಖೆ ಅಭಿಪ್ರಾಯಪಟ್ಟರು.

ನಗರದ ಶಾರದಾ ರುಡ್‌ಸೆಟಿಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ, ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಶ್ರಯದಲ್ಲಿ ಜಿಲ್ಲೆಯ ಆಯ್ದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯಕಾರ್ಯನಿರ್ವಾಹಕರಿಗೆ ಆಯೋಜಿಸಿದ್ದ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಪತ್ತಿನ ಸಂಘಗಳು ಬದಲಾವಣೆಗೆ ಹೊಂದಿಕೊಂಡು ಕೆಲಸ ಮಾಡಬೇಕು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ಬೀಜಗಳನ್ನು ಪಡೆದು ರೈತರಿಗೆ ಗ್ರಾಮಮಟ್ಟದಲ್ಲಿ ಸುಲಭವಾಗಿ ದೊರೆಯುವಂತೆ ನೋಡಿಕೊಳ್ಳಬೇಕು. ಇದರಿಂದ ಸಂಘಗಳೊಂದಿಗೆ ರೈತರ ಭಾವನಾತ್ಮಕ ಸಂಬಂಧ ಬೆಳೆಯುತ್ತದೆ. ಸಂಘಗಳು ಬಲಿಷ್ಠವಾಗಿ ಬೆಳೆಯಲು ಅನುಕೂಲವಾಗುತ್ತದೆ’ ಎಂದು ತಿಳಿಸಿದರು.

ಡಿಸಿಸಿ ಬ್ಯಾಂಕ್‌ ಉಪ ಪ್ರಧಾನ ವ್ಯವಸ್ಥಾಪಕ ಚನ್ನಬಸಯ್ಯ ಸ್ವಾಮಿ ಮಾತನಾಡಿ, ‘ಸಾಲ ಪಡೆದವರು ಬ್ಯಾಂಕ್‌ನಿಂದ ಬರುವ ಪ್ರತಿಯೊಂದು ಸುತ್ತೋಲೆಗೆ ಪ್ರತಿಕ್ರಿಯೆ ನೀಡಬೇಕು. ಸಾಲ ಮನ್ನಾದ ಬಗ್ಗೆ ಸರಿಯಾಗಿ ಅರಿತುಕೊಳ್ಳಬೇಕು. ಸುತ್ತೋಲೆಗಳನ್ನು ದಾಖಲೆ ರೂಪದಲ್ಲಿ ಇಟ್ಟುಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಸಹಕಾರ ಸಂಘಗಳ ಉಪ ನಿಬಂಧಕ ವಿಶ್ವನಾಥ ಮಲಕೂಡ, ‘ಪ್ರಾಥಮಿಕ ಕೃಷಿ ಪತ್ತಿನ ಸಂಘಗಳ ಕಾರ್ಯದರ್ಶಿಗಳು ಸಾನ ಮನ್ನಾ ಮಾಡಲಾದ ರೈತರ ವಿವರಗಳನ್ನು ಬರೆದಿಡಬೇಕು. ಇದರಿಂದ ರೈತರ ನಿಖರ ಮಾಹಿತಿ ಸಂಗ್ರಹಿಸಲು ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.

‘ಕಾನೂನು ಚೌಕಟ್ಟಿನಲ್ಲೇ ವ್ಯವಹಾರ ಮಾಡಬೇಕು. ಸ್ವಲ್ಪ ನಿರ್ಲಕ್ಷ್ಯ ತೋರಿದರೂ ಸಮಸ್ಯೆಗಳು ಸುತ್ತಿಕೊಳ್ಳುತ್ತವೆ. ಆದ್ದರಿಂದ ಎಚ್ಚರಿಕೆಯಿಂದ ಕೆಲಸ ಮಾಡಬೇಕು’ ಎಂದು ಹೇಳಿದರು.

ಭಾಲ್ಕಿಯ ಸಹಕಾರ ಅಭಿವೃದ್ಧಿ ಅಧಿಕಾರಿ ಸಂಗಮ ಬಿ.ಎಚ್., ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಪ್ರಭಾರ ಅಧೀಕ್ಷಕ ಸಂಗಮೇಶ ಮಾತನಾಡಿದರು.

ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ನಿರ್ವಾಹಣಾಧಿಕಾರಿ ಎಚ್‌್.ಆರ್‌.ಮಲ್ಲಮ್ಮ ನಿರೂಪಿಸಿದರು. ಬಸವರಾಜ ಕಲ್ಯಾಣಿ ಸ್ವಾಗತಿಸಿದರು. ಸಹಕಾರ ಶಿಕ್ಷಕಿ ರೇಖಾ ಗಾಯಕವಾಡ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT