ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾಂಗ್ರೆಸ್‌ ಪರ ವಾತಾವರಣ’

ಮಾಜಿ ಶಾಸಕ ಎಚ್‌.ಎಂ. ವಿಶ್ವನಾಥ್‌ ಅಭಿಮತ
Last Updated 9 ಮೇ 2018, 12:15 IST
ಅಕ್ಷರ ಗಾತ್ರ

ಹಾಸನ: ‘ಜಿಲ್ಲೆಯಲ್ಲಿ ಕಾಂಗ್ರೆಸ್ ಪರ ಅಲೆ ಇದೆ. 7 ಕ್ಷೇತ್ರಗಳಲ್ಲಿಯೂ ಪಕ್ಷದ ಅಭ್ಯರ್ಥಿಗಳು ಜಯಗಳಿಸುವರು’ ಎಂದು ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್ ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲೆಯ ಎಲ್ಲೆಡೆ ಪ್ರವಾಸ ಮಾಡಿದ್ದೇನೆ. ಉತ್ತಮ ವಾತಾವರಣವಿದೆ. ಸಕಲೇಶಪುರ ವಿಧಾನ ಸಭಾ ಕ್ಷೇತ್ರದಲ್ಲಿ ಈ ಬಾರಿ ಅನಿರೀಕ್ಷಿತ ಫಲಿತಾಂಶ ಲಭ್ಯವಾಗಲಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹೊಳೆನರಸೀಪುರದಲ್ಲಿಯೂ ಪಕ್ಷದ ಅಭ್ಯರ್ಥಿ ಗೆಲ್ಲುತ್ತಾರೆ. ಅರಸೀಕೆರೆಯಲ್ಲಿ ರಾಜಕೀಯ ದ್ರುವಿಕರಣವಾಗಿದೆ.  ಉಳಿದೆಡೆ ಪಕ್ಷಕ್ಕೆ ಉತ್ತಮ ಬೆಂಬಲ ವ್ಯಕ್ತವಾಗಿದೆ ಎಂದು ಹೇಳಿದರು.

‘ಸಕಲೇಶಪುರ ಕ್ಷೇತ್ರದಲ್ಲಿ ಜೆಡಿಎಸ್ ಶಾಸಕರು ಅಂಬೇಡ್ಕರ್ ಭವನ ಪೂರ್ಣಗೊಳಿಸಿಲ್ಲ. ಕಾಡಾನೆ ಹಾವಳಿ ತಪ್ಪಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಮಿನಿ ವಿಧಾನಸೌಧದ 2ನೇ ಹಂತದ ಕಾಮಗಾರಿಗೆ ಪ್ರಯತ್ನಿಸಿಲ್ಲ ಎಂದು ದೂರಿದರು.

‘ಕಾಂಗ್ರೆಸ್‌ ಸರ್ಕಾರದ ಯೋಜನೆಗಳನ್ನು ಹೊರತುಪಡಿಸಿ ಶಾಸಕರು ಪ್ರಯತ್ನದಿಂದ ಒಂದು ಯೋಜನೆ ಬಂದಿಲ್ಲ. ಮೀಸಲು ಕ್ಷೇತ್ರದಿಂದ ಆಯ್ಕೆಯಾಗಿದ್ದೇನೆ ಎಂದೇ ಶಾಸಕರು ಮರೆತಿದ್ದಾರೆ’ ಎಂದು ಆರೋಪಿಸಿದರು.

‘ಜೆಡಿಎಸ್ ಒಳಮರ್ಮಗಳು ನಮಗೆ ಗೊತ್ತಿದೆ. ಪ್ರಧಾನಿ ಮೋದಿ ಜತೆ ಮೊದಲೇ ಒಪ್ಪಂದವಾಗಿದೆ. ಎಚ್‌.ಡಿ. ದೇವೇಗೌಡ, ಕುಮಾರಸ್ವಾಮಿ ಅವರ ಬಲೆಗೆ ಈ ಬಾರಿ ಯಾರೂ ಬೀಳುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಾವಗಲ್ ಮಂಜುನಾಥ್, ರಾಜ್ಯಸಭಾ ಮಾಜಿ ಸದಸ್ಯ ಎಚ್.ಕೆ.ಜವರೇಗೌಡ, ಮುಖಂಡರಾದ ಖಡಾಕಡಿ ಪೀರ್ ಸಾಬ್, ಮುನಿಸ್ವಾಮಿ, ಜಾಕೀರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT