ಸರಳ ಬಹುಮತಕ್ಕೆ 112 ಸ್ಥಾನ ಅಗತ್ಯ

ರಾಜ್ಯದಲ್ಲಿ ಅತಂತ್ರ ವಿಧಾನಸಭೆ: ಸರ್ಕಾರ ರಚನೆಗೆ ಜೆಡಿಎಸ್‌ಗೆ ಕಾಂಗ್ರೆಸ್‌ ಬೆಂಬಲ

76 ಸ್ಥಾನಗಳನ್ನು ಪಡೆದಿರುವ ಕಾಂಗ್ರೆಸ್, 39 ಸ್ಥಾನಗಳನ್ನು ಪಡೆದಿರುವ ಜೆಡಿಎಸ್‌ ಪಕ್ಷಕ್ಕೆ ಬೆಂಬಲ ನೀಡುವ ಮೂಲಕ ಮೈತ್ರಿ ಸರ್ಕಾರ ರಚನೆ ಮುಂದಾಗಿದೆ.

ರಾಜ್ಯದಲ್ಲಿ ಅತಂತ್ರ ವಿಧಾನಸಭೆ: ಸರ್ಕಾರ ರಚನೆಗೆ ಜೆಡಿಎಸ್‌ಗೆ ಕಾಂಗ್ರೆಸ್‌ ಬೆಂಬಲ

ಬೆಂಗಳೂರು: ರಾಜ್ಯ ವಿಧಾನಸಭೆಯ 222 ಕ್ಷೇತ್ರಗಳ ಪೈಕಿ ಬಿಜೆಪಿ 104 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಆದರೆ, ಸರಳ ಬಹುಮತ ಪಡೆಯುವಲ್ಲಿ ವಿಫಲವಾಗಿದ್ದು ಅತಂತ್ರ ವಿಧಾನಸಭೆ ಸೃಷ್ಟಿಯಾಗಿದೆ.

ನಾಲ್ಕನೇ ಬಾರಿ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾದಂತಾಗಿದೆ. ಯಾವುದೇ ಪಕ್ಷವು ಸರಳ ಬಹುಮತವನ್ನು ಪಡೆಯುವಲ್ಲಿ ವಿಫಲವಾದಾಗ ಅನಂತ್ರ ವಿಧಾನಸಭೆಯಾಗುತ್ತದೆ. ಯಾವುದೇ ಪಕ್ಷ ಸರ್ಕಾರ ರಚಿಸಲು 112 ಸ್ಥಾನಗಳು ಅಗತ್ಯವಿದೆ.

76 ಸ್ಥಾನಗಳನ್ನು ಪಡೆದಿರುವ ಕಾಂಗ್ರೆಸ್, 39 ಸ್ಥಾನಗಳನ್ನು ಪಡೆದಿರುವ ಜೆಡಿಎಸ್‌ ಪಕ್ಷಕ್ಕೆ ಬೆಂಬಲ ನೀಡುವ ಮೂಲಕ ಮೈತ್ರಿ ಸರ್ಕಾರ ರಚನೆ ಮುಂದಾಗಿದೆ.

Comments