ನವದೆಹಲಿ: ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ರಚನೆಗೆ ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮಂಗಳವಾರ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ ಸರ್ಕಾರ ರಚಿಸುವ ಯಾವುದೇ ಅವಕಾಶವನ್ನು ಬಿಜೆಪಿ ಅಷ್ಟು ಸುಲಭವಾಗಿ ಬಿಟ್ಟುಕೊಡುವುದಿಲ್ಲ ಎಂದು ಸುಳಿವು ನೀಡಿದ್ದಾರೆ.

104 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಪಕ್ಷದ ಸಾಧನೆಗೆ ತೃಪ್ತಿ ವ್ಯಕ್ತಪಡಿಸಿದ ಮೋದಿ, ‘ಅಸಾಮಾನ್ಯ ಮತ್ತು ಅಭೂತಪೂರ್ವ’ ಗೆಲುವು ಎಂದು ಬಣ್ಣಿಸಿದ್ದಾರೆ.

ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯ ಅಭಿವೃದ್ಧಿಯ ಪಯಣಕ್ಕೆ ಯಾರೂ ಅಡ್ಡಿಯಾಗಲು ಬಿಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ.

‘ಬಿಜೆಪಿ ಸುಲಭವಾಗಿ ಅವಕಾಶವನ್ನು ಕೈಚೆಲ್ಲುತ್ತದೆ ಎಂದು ವಿರೋಧಿಗಳು ಭಾವಿಸಿದ್ದಾರೆ. ಆದರೆ, ಅದಕ್ಕೆ ಅವಕಾಶ ಕೊಡುವುದಿಲ್ಲ’ ಎಂದು ಅವರು ಹೇಳಿದ್ದಾರೆ.

ಬಿಜೆಪಿಯು ಉತ್ತರ ಭಾರತದ ಹಿಂದಿ ಭಾಷಿಕರ ಪಕ್ಷ ಎಂಬ ಆರೋಪವನ್ನು ಕರ್ನಾಟಕದ ಫಲಿತಾಂಶ ಸುಳ್ಳು ಮಾಡಿ ತೋರಿಸಿದೆ ಎಂದು ಮೋದಿ ಸಂತಸವ್ಯಕ್ತಪಡಿಸಿದ್ದಾರೆ.

ಧರ್ಮ, ಜಾತಿಯ ಮೇಲೆ ಜನರನ್ನು ಒಡೆಯುವ ಕಾಂಗ್ರೆಸ್ ತಂತ್ರ ವಿಫಲವಾಗಿದೆ. ಕರ್ನಾಟಕದ ಮತದಾರರು ಕಾಂಗ್ರೆಸ್‌ಗೆ ತಕ್ಕಪಾಠ ಕಲಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.