ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರ ರಚಿಸಲು ಬಿಜೆಪಿಗೆ ಅವಕಾಶ ಕೊಟ್ಟರೆ ಪ್ರತಿಭಟನೆ ಮಾಡಬೇಕಾಗುತ್ತದೆ: ಸಿದ್ದರಾಮಯ್ಯ

Last Updated 16 ಮೇ 2018, 9:35 IST
ಅಕ್ಷರ ಗಾತ್ರ

ಬೆಂಗಳೂರು: ಬೆಳಿಗ್ಗೆ ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕನ ಆಯ್ಕೆ ಅಂತಿಮವಾಗಿಲ್ಲ. ಸಂಜೆ ಮತ್ತೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಆಗ ಆಯ್ಕೆಯನ್ನು ಕೈ ನಾಯಕರು ಅಂತಿಮಗೊಳಿಸಲಿದ್ದಾರೆ. ಸಭೆ ಬಳಿಕ ಸಿದ್ದರಾಮಯ್ಯ ಶಾಂಗ್ರೀಲಾ ಹೋಟೆಲ್‌ಗೆ ತೆರಳಿದರು.

ಈ ವೇಳೆ ಮಾತನಾಡಿದ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಹಾಗೂ ಜೆಡಿಎಸ್‌ ಸರ್ಕಾರ ರಚನೆಗೆ ಸಂಖ್ಯಾ ಬಲವಿದೆ. ಈ ಆಧಾರದ ಮೇಲೆ ರಾಜ್ಯಪಾಲರು ಅವಕಾಶ ಕೊಡಬೇಕು. ಒಂದು ವೇಳೆ ಬಿಜೆಪಿಗೆ ಅವಕಾಶ ಕೊಟ್ಟರೆ ಸಂವಿಧಾನ‌ ವಿರೋಧಿಯಾಗುತ್ತೆ ಎಂದರು.

ಬಿಜೆಪಿಗೆ ಅವಕಾಶ ಕೊಟ್ಟರೆ ಇದರ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತೆ. ಸಂವಿಧಾನ ನಿಯಮಾವಳಿಯಂತೆ ನಡೆದುಕೊಳ್ಳಬೇಕು. ಸಂವಿಧಾನ ಬಾಹಿರವಾಗಿ ನಡೆದುಕೊಂಡರೆ ರಾಜ್ಯಪಾಲರ ಹುದ್ದೆಗೆ ಗೌರವ ಇರಲ್ಲ. ಬಿಜೆಪಿ ಕುದರೆ ವ್ಯಾಪರಕ್ಕೆ ಮುಂದಾಗಿದೆ. ಅದ್ರೆ ನಮ್ಮ ಶಾಸಕರು ಒಂದಾಗಿದ್ದೇವೆ ಎಂದರು.

* ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT