ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂಗಾಮಿ ಸ್ಪೀಕರ್‌ ಆಗಿ ಕೆ.ಜಿ.ಬೊಪಯ್ಯ ಪ್ರಮಾಣವಚನ

Last Updated 18 ಮೇ 2018, 10:58 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಕೆ.ಜಿ.ಬೋಪಯ್ಯ ಅವರು ಶುಕ್ರವಾರ ಹಂಗಾಮಿ ಸ್ಪೀಕರ್ ಆಗಿ ನೇಮಕವಾಗಿದ್ದಾರೆ.

ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇವರಿಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

‘ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸುವ ಸಮಾರಂಭಕ್ಕೆ ಅವಕಾಶ ನೀಡಬಾರದು’ ಎಂದು ಕೋರಿ ಕಾಂಗ್ರೆಸ್‌–ಜೆಡಿಎಸ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಶುಕ್ರವಾರ ಬೆಳಿಗ್ಗೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್‌ ನಾಳೆ (ಶನಿವಾರ) ಸಂಜೆ 4ಕ್ಕೆ ಬಹುಮತ ಸಾಬೀತುಪಡಿಸುವಂತೆ ಆದೇಶ ನೀಡಿದೆ.

ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹೇಗೆ ನಡೆಯಬೇಕು ಎಂಬುದನ್ನು ಹಂಗಾಮಿ ಸ್ಪೀಕರ್‌ ನಿರ್ಣಯಿಸಬೇಕು ಎಂದು ಸುಪ್ರೀಂಕೋರ್ಟ್‌ ತಿಳಿಸಿದೆ. ಈ ಹಿನ್ನಲೆಯಲ್ಲಿ ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್‌ ಆಗಿ ನೇಮಕ ಮಾಡಲಾಗಿದೆ.

ಸುಪ್ರಿಂಕೋರ್ಟ್‌ ತೀರ್ಪು ಪ್ರಕಟವಾದ ನಂತರ ಮುಂದಿನ ಸ್ಪೀಕರ್ ಯಾರಾಗಲಿದ್ದಾರೆ ಎಂಬ ಬಗ್ಗೆ ರಾಜ್ಯದಲ್ಲಿ ಬಿಸಿಬಿಸಿ ಚರ್ಚೆ ಆರಂಭವಾಗಿತ್ತು. ಆರ್‌.ವಿ.ದೇಶಪಾಂಡೆ, ಉಮೇಶ್‌ ಕತ್ತಿ ಮತ್ತು ಜೆಡಿಎಸ್‌ನ ಎಚ್‌.ಕೆ. ಕುಮಾರಸ್ವಾಮಿ ಅವರ ಹೆಸರುಗಳೂ ಚರ್ಚೆಯಲ್ಲಿದ್ದವು. 

ಕಾಂಗ್ರೆಸ್‌ ವಿರೋಧ: ಬೋಪಯ್ಯ ಅವರನ್ನು ಸ್ಪೀಕರ್‌ ಆಗಿ ನೇಮಕ ಮಾಡಿರುವುದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಆಯ್ಕೆ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT