ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕದಲ್ಲಿ ಸೇರಿದ್ದ ಎಲ್ಲಾ ವಿಪಕ್ಷ ನಾಯಕರು ಇಂಧನ ಬೆಲೆ ಏರಿಕೆ ಬಗ್ಗೆ ಚರ್ಚಿಸಿದೆವು: ಮಮತಾ ಬ್ಯಾನರ್ಜಿ

Last Updated 24 ಮೇ 2018, 13:26 IST
ಅಕ್ಷರ ಗಾತ್ರ

ಕೋಲ್ಕತ್ತ: ನಿನ್ನೆ(ಬುಧವಾರ) ಕರ್ನಾಟಕದಲ್ಲಿ ಸೇರಿದ್ದ ವಿರೋಧ ಪಕ್ಷಗಳ ಎಲ್ಲಾ ನಾಯಕರು ದೇಶದಲ್ಲಿನ ಇಂಧನ ಬೆಲೆ ಏರಿಕೆ ಪರಿಣಾಮ ಜನಸಾಮಾನ್ಯರು ಮತ್ತು ರೈತರ ಮೇಲಾಗುತ್ತಿರುವ ಬಗ್ಗೆ ಚರ್ಚೆ ಮಾಡಿದೆವು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಹೇಳಿದ್ದಾರೆ.

ಬೆಲೆ ಏರಿಕೆಯನ್ನು ತಗ್ಗಿಸಿ, ಜನರ ಮೇಲಾಗುತ್ತಿರುವ ಹೊರೆಯನ್ನು ಕಡಿಮೆ ಮಾಡಿ ಎಂದು ನಾನು ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೆ ವಿಧಾನಸೌಧದ ಹೊರಗೆ ನಡೆದ ಮುಖ್ಯಮಂತ್ರಿಯಾಗಿ ಎಚ್‌.ಡಿ.ಕುಮಾರಸ್ವಾಮಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಮತಾ ಬ್ಯಾನರ್ಜಿ ಸೇರಿದಂತೆ ಕಾಂಗ್ರೆಸ್‌ನ ಅಧ್ಯಕ್ಷ ರಾಹುಲ್‌ ಗಾಂಧಿ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಪುದುಚೆರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ, ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌, ಬಿಎಸ್ಪಿ ಅಧ್ಯಕ್ಷೆ ಮಾಯಾವತಿ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಸಿಪಿಐನ ಡಿ.ರಾಜಾ, ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್‌, ಆರ್‌ಎಲ್‌ಡಿ ಅಧ್ಯಕ್ಷ ಅಜಿತ್‌ ಸಿಂಗ್‌, ಲೋಕ ತಾಂತ್ರಿಕ ಜನತಾ ದಳದ ಶರದ್‌ ಯಾದವ್‌ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT